ಇಂದು ಬೆಳಗಿನ ಜಾವ 1 ಗಂಟೆ ಸುಮಾರಿಗೆ ಆಂಧ್ರಪ್ರದೇಶದ ಅನಕಪಲ್ಲಿ ಜಿಲ್ಲೆಯ ಎಲಮಂಚಿಲಿ ನಿಲ್ದಾಣದ ಬಳಿ ರೈಲು ಸಂಖ್ಯೆ 18189 ಟಾಟಾನಗರ–ಎರ್ನಾಕುಲಂ ಎಕ್ಸ್‌ಪ್ರೆಸ್‌ನ ಮೂರು ಬೋಗಿಗಳಿಗೆ ಬೆಂಕಿ ಹೊತ್ತಿಕೊಂಡ ಘಟನೆ ನಡೆದಿದೆ.
ರೈಲು ಭೋಗಿಗಳು ಬೆಂಕಿಗೆ ಆಹುತಿಯಾದ ಪರಿಣಾಮ ಒಬ್ಬ ಪ್ರಯಾಣಿಕ ಸಾವನ್ನಪ್ಪಿದ್ದಾನೆ. ಮೃತರನ್ನು ಚಂದ್ರಶೇಖರ ಸುಂದರ (70) ಎಂದು ಗುರುತಿಸಲಾಗಿದೆ.
ಮೊದಲಿಗೆ ಬಿ1 ಕೋಚ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕ್ರಮೇಣ ಅದು ಹರಡುತ್ತಾ ಎಂ1 ಮತ್ತು ಬಿ2 ಗೆ ವ್ಯಾಪಿಸಿದೆ.
ಬೆಂಕಿ ಹೊತ್ತಿಕೊಂಡಿದ್ದನ್ನು ಗಮನಿಸಿದ ಲೋಕೊ ಪೈಲೆಟ್ ರೈಲು ನಿಲ್ಲಿಸಿ ನಡೆಯಬಹುದಾದ ದೊಡ್ಡ ದುರಂತವನ್ನು ತಪ್ಪಿಸಿದ್ದಾನೆ.
Author: Karnataka Files
Post Views: 209





