Download Our App

Follow us

Home » ರಾಜಕೀಯ » ಕೇಂದ್ರ ಸಚಿವ ಪ್ರಲ್ಲಾದ ಜೋಶಿಯವರಿಗೆ ಅಭಿವೃದ್ಧಿ ಕುರಿತು ಪ್ರಶ್ನಿಸಿದ ಯುವತಿ

ಕೇಂದ್ರ ಸಚಿವ ಪ್ರಲ್ಲಾದ ಜೋಶಿಯವರಿಗೆ ಅಭಿವೃದ್ಧಿ ಕುರಿತು ಪ್ರಶ್ನಿಸಿದ ಯುವತಿ

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಯುವತಿಯೊಬ್ಬಳು, ಕ್ಷೇತ್ರದ ಅಭಿವೃದ್ಧಿ ಕುರಿತು ಕೇಂದ್ರ ಸಚಿವ ಪಲ್ಲಾದ ಜೋಶಿಯವರನ್ನು ಪ್ರಶ್ನಿಸಿ ಗಮನ ಸೆಳೆದಿದ್ದಾಳೆ. 

ಈ ಯುವತಿ ಎಕ್ಸ್ ನಲ್ಲಿ ಹಾಕಿದ ಪೋಸ್ಟ್ ಇದೀಗ ಚರ್ಚೆಗೆ ಕಾರಣವಾಗಿದೆ. 

ಪ್ರಮುಖವಾಗಿ ಸಂಸದರ ನಿಧಿ ( MP_Lad ) ಯಿಂದ ಕೈಗೆತ್ತಿಕೊಳ್ಳಲಾದ ಕಾಮಗಾರಿ ಬಗ್ಗೆ ಆ ಯುವತಿ ಬೆಳಕು ಚೆಲ್ಲಿದ್ದಾಳೆ. 

18 ನೇ ಲೋಕಸಭಾ ಅವಧಿಯಲ್ಲಿ ಧಾರವಾಡ ಲೋಕಸಭಾ ಕ್ಷೇತ್ರಕ್ಕೆ ಸಂಸದರ ನಿಧಿಯಿಂದ 9.8 ಕೋಟಿ ಹಣ ಬಿಡುಗಡೆಯಾಗಿದ್ದು, ಈ ಪೈಕಿ ಈ ವರೆಗೆ ಕೇವಲ 1.11 ಕೋಟಿ ಮಾತ್ರ ಖರ್ಚಾಗಿರುವದನ್ನು ಆ ಯುವತಿ ತೋರಿಸಿದ್ದಾಳೆ.

101 ಕಾಮಗಾರಿಗೆ ಅನುಮೋದನೆ ಸಿಕ್ಕಿದ್ದು, 101 ಕಾಮಗಾರಿಗಳ ಪೈಕಿ ಕೇವಲ 11 ಕಾಮಗಾರಿಗಳು ಮಾತ್ರ ಪೂರ್ಣಗೊಂಡಿವೆ.

ಸಂಸದರ ನಿಧಿಯಿಂದ ಸಮುದಾಯ ಭವನ ಮಾತ್ರ ನಿರ್ಮಾಣ ಮಾಡಲಾಗಿದ್ದು, ಒಂದೆರೆಡು ಶಾಲೆಗಳ ಕೊಠಡಿ ನಿರ್ಮಾಣ ಮಾಡಲಾಗಿದೆ ಎಂದು ತಿಳಿಸಿದ್ದಾಳೆ.

ಆಕೆಯ ಎಕ್ಸ್ ಪೋಸ್ಟ್ ಇಲ್ಲಿದೆ. https://x.com/i/status/2007703609446936597

Karnataka Files
Author: Karnataka Files

Leave a Comment

RELATED LATEST NEWS

Top Headlines

ರಾಜ್ಯಸಭೆಗೆ ಕರ್ನಾಟಕದಿಂದ ಕಾಂಗ್ರೇಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ : ಮನ್ಸೂರ್ ಅಲಿ ಖಾನ್ ಗೆ ಟಿಕೇಟ್ ಘೋಷಣೆ

ಕರ್ನಾಟಕದಿಂದ ರಾಜ್ಯಸಭೆಗೆ ನಡೆಯುವ ಚುನಾವಣೆಗೆ ಕಾಂಗ್ರೇಸ್ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟ ಮಾಡಿದೆ. ಕರ್ನಾಟಕದಿಂದ ಅಖಿಲ ಭಾರತ ಕಾಂಗ್ರೇಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪವನ ಖೇರಾ ಹಾಗೂ

Live Cricket

error: Content is protected !!