Download Our App

Follow us

Home » ಕಾನೂನು » ಐಎಎಸ್ ಅಧಿಕಾರಿ ದಿವಂಗತ ಮಹಾಂತೇಶ್ ಬೀಳಗಿ‌ಯವರ ಮಗಳಿಗೆ ಸರ್ಕಾರಿ ನೌಕರಿ ನೀಡಿದ ಸಿದ್ದರಾಮಯ್ಯ

ಐಎಎಸ್ ಅಧಿಕಾರಿ ದಿವಂಗತ ಮಹಾಂತೇಶ್ ಬೀಳಗಿ‌ಯವರ ಮಗಳಿಗೆ ಸರ್ಕಾರಿ ನೌಕರಿ ನೀಡಿದ ಸಿದ್ದರಾಮಯ್ಯ

ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ‌ ಅವರು ಸೇವೆಯಲ್ಲಿರುವಾಗಲೇ ನಿಧನ ಹೊಂದಿದ ಹಿನ್ನೆಲೆಯಲ್ಲಿ ಅವರ ಪುತ್ರಿ ಚೈತನ್ಯಾ ಎಮ್.ಬೀಳಗಿ ಅವರಿಗೆ ಅನುಕಂಪದ ಆಧಾರದ ಮೇಲೆ ಸರ್ಕಾರಿ ಉದ್ಯೋಗದ ನೇಮಕಾತಿ ಪತ್ರವನ್ನು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಸ್ತಾಂತರಿಸಿದರು.

ಇದೇ ವೇಳೆ ಮುಖ್ಯಮಂತ್ರಿಯವರು, ಬೀಳಗಿಯವರ ಪುತ್ರಿ ಚೈತನ್ಯಳಿಗೆ, ತಂದೆಯಂತೆಯೇ ಸಮಾಜಮುಖಿಯಾಗಿ ಕರ್ತವ್ಯ ನಿರ್ವಹಿಸುವಂತೆ ಶುಭ ಕೋರಿದರು.

ಈ ಸಂದರ್ಭದಲ್ಲಿ ಸಚಿವರಾದ ಹೆಚ್.ಕೆ.ಪಾಟೀಲ್, ಎಂ.ಬಿ.ಪಾಟೀಲ್, ಶಿವಾನಂದ ಪಾಟೀಲ್, ಕಾಂಗ್ರೆಸ್ ಪಕ್ಷದ ಮುಖ್ಯ ಸಚೇತಕರಾದ ಅಶೋಕ್ ಪಟ್ಟಣ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರು ಉಪಸ್ಥಿತರಿದ್ದರು.

Karnataka Files
Author: Karnataka Files

Leave a Comment

RELATED LATEST NEWS

error: Content is protected !!