ಇತಿಹಾಸದಲ್ಲಿ ಮೊದಲ ಬಾರಿಗೆ, ಹಾಲಿ ಮುಖ್ಯಮಂತ್ರಿಯೊಬ್ಬರು ನ್ಯಾಯಾಲಯದಲ್ಲಿ ಪ್ರಕರಣವೊಂದರಲ್ಲಿ ವಾದಿಸಲಿದ್ದಾರೆ.
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇಂದು ಸುಪ್ರೀಂ ಕೋರ್ಟ್ನಲ್ಲಿ ಎಸ್ಐಆರ್ ಮತ್ತು ಇಸಿಐ ವಿರುದ್ಧ ಹೋರಾಡಲಿದ್ದಾರೆ. ಸ್ವತಃ ವಕೀಲರಾಗಿರುವ ಅವರು ಅದರ, ಸಾಧಕ, ಭಾದಕ ಮತ್ತು ದುರುದ್ದೇಶಪೂರಿತ ಯೋಜನೆಗಳನ್ನು ಬಹಿರಂಗಪಡಿಸಲಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ಎಸ್ಐಆರ್ ಅನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಬ್ಯಾನರ್ಜಿ ಅವರು ಖುದ್ದಾಗಿ ಹಾಜರಾಗುತ್ತಿದ್ದಾರೆ.
ವಿವಿಧ ರಾಜ್ಯಗಳಲ್ಲಿ ಭಾರತೀಯ ಚುನಾವಣಾ ಆಯೋಗ (ECI) ನಡೆಸುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಅನ್ನು ಪ್ರಶ್ನಿಸುವ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿದೆ.
ಪಶ್ಚಿಮ ಬಂಗಾಳದಲ್ಲಿ SIR ಗೆ ಸಂಬಂಧಿಸಿದ ಅರ್ಜಿಗಳ ವಿಚಾರಣೆಯಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಾದ ಮಂಡಿಸುತ್ತಿದ್ದಾರೆ.

ಅವರು ಖುದ್ದಾಗಿ ಹಾಜರಾಗಲು ಮತ್ತು ವಾದಿಸಲು ಅನುಮತಿ ಕೋರಿ ಮಧ್ಯಂತರ ಅರ್ಜಿಯನ್ನು ಸಲ್ಲಿಸಿದ್ದಾರೆ.
ಮಮತಾ ಬ್ಯಾನರ್ಜಿ ಕಾನೂನು ಪದವಿ ಪಡೆದಿದ್ದಾರೆ. ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧದ ಪ್ರಕರಣಕ್ಕಾಗಿ ಅವರು ಇಂದು ಸುಪ್ರೀಂ ಕೋರ್ಟಿಗೆ ಬಂದಿದ್ದಾರೆ.
ಇದೇ ವೇಳೆ ED ಪ್ರಕರಣಕ್ಕೆ ಸಂಬಂಧಿಸಿದಂತೆ, ವಿಚಾರಣೆಯನ್ನು ಫೆಬ್ರವರಿ 10 ಕ್ಕೆ ಮುಂದೂಡಲಾಗಿದೆ.





