Download Our App

Follow us

Home » ಕಾನೂನು » ಧಾರವಾಡ : ಜಿಲ್ಲಾ ಸರ್ಕಾರಿ ನೌಕರ ಸಂಘದ ಅಧ್ಯಕ್ಷ ಸಿದ್ದನಗೌಡರ ಮನೆ ಮೇಲೆ ಲೋಕಾಯುಕ್ತ ದಾಳಿ

ಧಾರವಾಡ : ಜಿಲ್ಲಾ ಸರ್ಕಾರಿ ನೌಕರ ಸಂಘದ ಅಧ್ಯಕ್ಷ ಸಿದ್ದನಗೌಡರ ಮನೆ ಮೇಲೆ ಲೋಕಾಯುಕ್ತ ದಾಳಿ

ಇಂದು ಬೆಳಗಿನ ಜಾವ ಲೋಕಾಯುಕ್ತ ಪೊಲೀಸರು ಧಾರವಾಡ ಜಿಲ್ಲಾ ಸರ್ಕಾರಿ ನೌಕರ ಸಂಘದ ಅಧ್ಯಕ್ಷ ಸೋಮಲಿಂಗಪ್ಪ ಸಿದ್ದನಗೌಡರ ಮನೆ ಮೇಲೆ ದಾಳಿ ನಡೆಸಿದ್ದಾರೆ.

ಸಿದ್ದನಗೌಡರಿಗೆ ಸೇರಿದ ನಾಲ್ಕು ಕಡೆಗಳಲ್ಲಿ ಏಕಕಾಲಕ್ಕೆ ಲೋಕಾ ದಾಳಿ ನಡೆದಿದೆ. 

ಸಿದ್ದನಗೌಡರ, ಸರ್ವೆ ಇಲಾಖೆಯ ಸೂಪರ್‌ವೈಸರ್ ಆಗಿದ್ದು, ಎರಡನೇ ಬಾರಿ ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾಗಿದ್ದಾರೆ. 

ಅವರ ಮನೆ ಮತ್ತು ಕಚೇರಿ ಮೇಲೆ ಏಕಕಾಲಕ್ಕೆ ದಾಳಿ ನಡೆದಿದ್ದು, ಆದಾಯ ಮೀರಿ ಆಸ್ತಿ ಗಳಿಸಿರೋ ಆರೋಪದ ಹಿನ್ನೆಲೆಯಲ್ಲಿ ದಾಳಿ ನಡೆದಿದೆ ಎನ್ನಲಾಗಿದೆ. 

ಲೋಕಾ ಎಸ್ಪಿ ಸಿದ್ಧಲಿಂಗಪ್ಪ ನೇತ್ರತ್ವದಲ್ಲಿ ದಾಳಿ ಮಾಡಲಾಗಿದ್ದು, ನಗರದ ಭಾರತಿನಗರ ಬಡಾವಣೆಯಲ್ಲಿರೋ ಮನೆ, ಐಸ್ ಗೇಟ್ ಬಳಿ ಇರೋ ಸರ್ವೆ ಕಚೇರಿ, ಬೆಳಗಾವಿ ಜಿಲ್ಲೆಯ ಮುರಗೋಡದಲ್ಲಿನ ಮನೆ ಮೇಲೂ ದಾಳಿ ಮುಂದುವರೆದಿದೆ.

ಒಟ್ಟು ನಾಲ್ಕು ಕಡೆಯಲ್ಲಿ ನಡೆಸಿದ ದಾಳಿ ವೇಳೆ ಅಪಾರ ಪ್ರಮಾಣದ ಆಸ್ತಿ ಸಿಗಬಹುದು ಎಂದು ಹೇಳಲಾಗಿದ್ದು, ಲೋಕಾ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. 

 

 

Karnataka Files
Author: Karnataka Files

Leave a Comment

RELATED LATEST NEWS

Top Headlines

ರಾಜ್ಯಸಭೆಗೆ ಕರ್ನಾಟಕದಿಂದ ಕಾಂಗ್ರೇಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ : ಮನ್ಸೂರ್ ಅಲಿ ಖಾನ್ ಗೆ ಟಿಕೇಟ್ ಘೋಷಣೆ

ಕರ್ನಾಟಕದಿಂದ ರಾಜ್ಯಸಭೆಗೆ ನಡೆಯುವ ಚುನಾವಣೆಗೆ ಕಾಂಗ್ರೇಸ್ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟ ಮಾಡಿದೆ. ಕರ್ನಾಟಕದಿಂದ ಅಖಿಲ ಭಾರತ ಕಾಂಗ್ರೇಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪವನ ಖೇರಾ ಹಾಗೂ

Live Cricket

error: Content is protected !!