Download Our App

Follow us

Home » ಕಾನೂನು » ರೈತರನ್ನು ಮದುವೆಯಾಗುವ ಮಹಿಳೆಯರಿಗೆ ವಿಶೇಷ ಭತ್ಯೆ ನೀಡುವಂತೆ ಸರ್ಕಾರಕ್ಕೆ ಪತ್ರ ಬರೆದ ಶಾಸಕ

ರೈತರನ್ನು ಮದುವೆಯಾಗುವ ಮಹಿಳೆಯರಿಗೆ ವಿಶೇಷ ಭತ್ಯೆ ನೀಡುವಂತೆ ಸರ್ಕಾರಕ್ಕೆ ಪತ್ರ ಬರೆದ ಶಾಸಕ

ಗ್ರಾಮೀಣ ಭಾಗದಲ್ಲಿ ರೈತರನ್ನು ಮದುವೆಯಾಗಲು ಮಹಿಳೆಯರು ಹಿಂಜರಿಯುತ್ತಿದ್ದಾರೆ. 

ರೈತರನ್ನು ಮದುವೆಯಾಗುವ ಮಹಿಳೆಯರಿಗೆ ವಿಶೇಷ ಪ್ರೋತ್ಸಾಹ ಧನ ನೀಡುವಂತೆ ಕುಣಿಗಲ್ ಶಾಸಕ ಡಾ. ರಂಗನಾಥ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ. 

ಕೃಷಿಯಲ್ಲಿ ತೊಡಗಿರುವ ಅನೇಕ ಗ್ರಾಮೀಣ ಯುವಕರು ಅವಿವಾಹಿತರಾಗಿಯೇ ಉಳಿದಿದ್ದಾರೆ. ಮಹಿಳೆಯರು ರೈತರನ್ನು ಮದುವೆಯಾಗಲು ಹಿಂಜರಿಯುತ್ತಿದ್ದಾರೆಂದು ಕುಣಿಗಲ್ ಶಾಸಕ ಡಾ. ರಂಗನಾಥ್ ಸರ್ಕಾರಕ್ಕೆ ಪತ್ರ ಬರೆದು ಗಮನ ಸೆಳೆದಿದ್ದಾರೆ.

ಈ ಸಲದ ಬಜೆಟ್ ಅಧಿವೇಶನದಲ್ಲಿ ಸರ್ಕಾರ ರೈತರನ್ನು ಮದುವೆಯಾಗುವ ಮಹಿಳೆಯರಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಹೊಸ ಕಾರ್ಯಕ್ರಮ ಘೋಷಿಸಬೇಕೆಂದು ಶಾಸಕರು ಮನವಿ ಮಾಡಿದ್ದಾರೆ. 

Karnataka Files
Author: Karnataka Files

Leave a Comment

RELATED LATEST NEWS

error: Content is protected !!