Download Our App

Follow us

Home » ಕಾನೂನು » ಕ್ಲೈಮಾಕ್ಸ್ ಹಂತಕ್ಕೆ ತಲುಪಿದ ಕುರ್ಚಿ ಕಾದಾಟ / ರಣರಂಗವನ್ನು ಬಿಟ್ಟು ಓಡಿ ಹೋಗುವ ಹೇಡಿ ನಾನಾಗಲಾರೆ -ಸಿದ್ದರಾಮಯ್ಯ

ಕ್ಲೈಮಾಕ್ಸ್ ಹಂತಕ್ಕೆ ತಲುಪಿದ ಕುರ್ಚಿ ಕಾದಾಟ / ರಣರಂಗವನ್ನು ಬಿಟ್ಟು ಓಡಿ ಹೋಗುವ ಹೇಡಿ ನಾನಾಗಲಾರೆ -ಸಿದ್ದರಾಮಯ್ಯ

ಸಾಮಾಜಿಕ ನ್ಯಾಯಕ್ಕಾಗಿ ನನ್ನ ಉಸಿರಿರುವವರೆಗೆ ಹೋರಾಡುತ್ತೇನೆ ನನ್ನ ನಾಲ್ಕು ದಶಕಗಳ ರಾಜಕೀಯ ಜೀವನ ಎಂದಿಗೂ ಹೂವಿನ ಹಾಸಿಗೆ ಆಗಿರಲಿಲ್ಲ, ಅದು ಕಲ್ಲು – ಮುಳ್ಳುಗಳ ಹಾದಿಯಾಗಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಎಕ್ಸ್ ಖಾತೆಯಲ್ಲಿ ಹೇಳಿಕೊಂಡಿದ್ದಾರೆ. 

ನನ್ನನ್ನು ರಾಜಕೀಯವಾಗಿ ಮುಗಿಸಲು ಹಲವಾರು ದೊಡ್ಡ ದೊಡ್ಡ ನಾಯಕರು ಹಲವಾರು ಬಗೆಯ ಕುಟಿಲ ಕಾರಸ್ತಾನಗಳನ್ನು ಮಾಡಿದ್ದಾರೆ. ಅವುಗಳನ್ನೆಲ್ಲವನ್ನೂ ಜನತೆಯ ಆಶೀರ್ವಾದದಿಂದ ಗೆದ್ದು ಬಂದಿದ್ದೇನೆ.

ಇದು ನನ್ನ ವಿರುದ್ಧ ನಡೆಯುತ್ತಿರುವ ಷಡ್ಯಂತ್ರಗಳಲ್ಲ, ಇದು ನನ್ನನ್ನು ನಂಬಿರುವ, ಪ್ರೀತಿಸುತ್ತಿರುವ, ನನಗೆ ನಿರಂತರವಾಗಿ ಆಶೀರ್ವಾದ ನೀಡಿ ಬೆಂಬಲಿಸುತ್ತಿರುವ ನಿಮ್ಮ ವಿರುದ್ಧ ನಡೆಯುತ್ತಿರುವ ಷಡ್ಯಂತ್ರ ಎನ್ನುವುದು ನನಗೆ ಚೆನ್ನಾಗಿ ಗೊತ್ತು.

ಆದ್ದರಿಂದ ನನ್ನ ಉಸಿರು ಇರುವವರೆಗೆ ಈ ರಾಜಕೀಯ ಷಡ್ಯಂತ್ರ, ದ್ವೇಷ-ಅಸೂಯೆಯ ರಾಜಕಾರಣದ ವಿರುದ್ಧ ಹೋರಾಡುತ್ತೇನೆ. ಇದು ಸತ್ಯ, ನ್ಯಾಯ ಮತ್ತು ಧರ್ಮಕ್ಕಾಗಿ ನಡೆಯುತ್ತಿರುವ ಹೋರಾಟ. ನಿಮ್ಮೆಲ್ಲರ ಬೆಂಬಲದೊಂದಿಗೆ ಈ ಹೋರಾಟವನ್ನು ನನ್ನ ಉಸಿರು ಇರುವ ವರೆಗೆ ನಡೆಸುತ್ತೇನೆ ಎಂದು ಸಿದ್ದರಾಮಯ್ಯ ಗುಡುಗಿದ್ದಾರೆ.

ಕುರ್ಚಿ ಕಾದಾಟ ಕ್ಲೈಮಾಕ್ಸ್ ಹಂತಕ್ಕೆ ಬಂದಿದ್ದು, ಸಿದ್ದರಾಮಯ್ಯನವರು ಇಂದು ಗುಡುಗಿದ ರೀತಿ ನೋಡಿದರೆ, ಏನೋ ನಡೆದಿದೆ ಅನ್ನೋದು ಸ್ಪಷ್ಟವಾಗುತ್ತಿದೆ

ಇದೆಲ್ಲದರ ಕುರಿತು ಅವರು, ರಣರಂಗವನ್ನು ಬಿಟ್ಟು ಓಡಿ ಹೋಗುವ ಹೇಡಿ ನಾನಾಗಲಾರೆ ಎಂದು ಹೇಳಿದ್ದಾರೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ರಾಜ್ಯಸಭೆಗೆ ಕರ್ನಾಟಕದಿಂದ ಕಾಂಗ್ರೇಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ : ಮನ್ಸೂರ್ ಅಲಿ ಖಾನ್ ಗೆ ಟಿಕೇಟ್ ಘೋಷಣೆ

ಕರ್ನಾಟಕದಿಂದ ರಾಜ್ಯಸಭೆಗೆ ನಡೆಯುವ ಚುನಾವಣೆಗೆ ಕಾಂಗ್ರೇಸ್ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟ ಮಾಡಿದೆ. ಕರ್ನಾಟಕದಿಂದ ಅಖಿಲ ಭಾರತ ಕಾಂಗ್ರೇಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪವನ ಖೇರಾ ಹಾಗೂ

Live Cricket

error: Content is protected !!