Download Our App

Follow us

Home » ಕಾನೂನು » ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಶಿರಹಟ್ಟಿ ಶಾಸಕ ಡಾ. ಚಂದ್ರು ಲಮಾಣಿ

ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಶಿರಹಟ್ಟಿ ಶಾಸಕ ಡಾ. ಚಂದ್ರು ಲಮಾಣಿ

ಟೆಂಡರ್ ವಿಷಯಕ್ಕೆ ಸಂಬಂಧಿಸಿದಂತೆ 5 ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದ ಸಂದರ್ಭದಲ್ಲಿ ಲೋಕಾಯುಕ್ತ ಪೊಲೀಸರು ಶಿರಹಟ್ಟಿ ಶಾಸಕ ಡಾ, ಚಂದ್ರು ಲಮಾಣಿಯನ್ನು ಬಲೆಗೆ ಬೀಳಿಸಿದ್ದಾರೆ.

ಗುತ್ತಿಗೆದಾರ ವಿಜಯ ಪೂಜಾರ ಅವರಿಂದ ತಮ್ಮ ಬಾಲಾಜಿ ಹೆಸರಿನ ಆಸ್ಪತ್ರೆಯಲ್ಲಿ ಲಂಚ ಸ್ವೀಕರಿಸುತ್ತಿದ್ದ ಸಂದರ್ಭದಲ್ಲಿ ಲೋಕಾಯುಕ್ತ ಪೊಲೀಸರ ಕೈಗೆ ಸಿಕ್ಕು ಬಿದ್ದಿದ್ದಾರೆ.

ರಸ್ತೆ ನಿರ್ಮಾಣಕ್ಕೆ ಸಂಬಧಿಸಿದಂತೆ ಒಟ್ಟು 11 ಲಕ್ಷಕ್ಕೆ ಮಾತುಕತೆ ಆಗಿತ್ತು ಎನ್ನಲಾಗಿದೆ.

ಗದಗ ಜಿಲ್ಲಾ ಲೋಕಾಯುಕ್ತ ಪೊಲೀಸರು ಮತ್ತು ಧಾರವಾಡ ಜಿಲ್ಲಾ ಲೋಕಾಯುಕ್ತ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿದ್ದರು ಎನ್ನಲಾಗಿದೆ.

ಲೋಕಾಯುಕ್ತರು ಭರ್ಜರಿ ಭೇಟೆ ಆಡಿದ್ದು, ಶಿರಹಟ್ಟಿ ಶಾಸಕ ಚಂದ್ರು ಲಮಾಣಿಯವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಶಾಸಕರ ಸರ್ಕಾರಿ ಪಿ ಎ ಮಂಜುನಾಥ ವಾಲ್ಮೀಕಿ ಹಾಗೂ ಖಾಸಗಿ ಪಿ ಎ ಗುರು ಲಾವಣಿ ಎಂಬಿಬ್ಬರನ್ನು ಲೋಕಾಯುಕ್ತರು ವಿಚಾರಣೆಗೆ ಒಳಪಡಿಸಿದ್ಧಾರೆ.

Karnataka Files
Author: Karnataka Files

Leave a Comment

RELATED LATEST NEWS

error: Content is protected !!