ಧಾರವಾಡ ಅಂಜುಮನ್ ಇಸ್ಮಾಯಿಲ್ ತಮಟಗಾರ ಅವರು 17 ನೇ ಐತಿಹಾಸಿಕ ಬಜೆಟ್ ಮಂಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಅಭಿನಂಧಿಸಿದರು.
ಬಜೆಟ್ ನಲ್ಲಿ ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ವಿಶೇಷ ಯೋಜನೆಗಳನ್ನು ಕೊಟ್ಟಿರುವ ಸಿದ್ದರಾಮಯ್ಯನವರು ಅನೇಕ ಕಾರ್ಯಕ್ರಮಗಳನ್ನು ಘೋಷಿಸುವ ಮೂಲಕ ಕರ್ನಾಟಕವನ್ನು ಸಮೃದ್ಧ ನಾಡನ್ನಾಗಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆಂದು ತಿಳಿಸಿದರು.
ಹುಬ್ಬಳ್ಳಿ ಹಾಗೂ ಕಲಬುರಗಿಗೆ ಹಜ್ ಭವನ ನಿರ್ಮಾಣಕ್ಕೆ ಹಸಿರು ನಿಶಾನೆ ತೋರಿದ್ದು, ಅವರಿಗೆ ಉತ್ತರ ಕರ್ನಾಟಕದ ಮುಸ್ಲಿಮ್ ಸಮಾಜದ ಪರವಾಗಿ ಅಭಿನಂದನೆಗಳನ್ನು ಸಲ್ಲಿಸಿದರು.
Author: Karnataka Files
Post Views: 89




