Download Our App

Follow us

Home » ರಾಜಕೀಯ » ಪಶ್ಚಿಮ ಪದವೀಧರ ಚುನಾವಣೆ : ಬಿಜೆಪಿಯಲ್ಲಿ ಭಿನ್ನಮತ ಸ್ಫೋಟ / ಸಂಕನೂರರಿಗೆ ಸಂಕಷ್ಟ

ಪಶ್ಚಿಮ ಪದವೀಧರ ಚುನಾವಣೆ : ಬಿಜೆಪಿಯಲ್ಲಿ ಭಿನ್ನಮತ ಸ್ಫೋಟ / ಸಂಕನೂರರಿಗೆ ಸಂಕಷ್ಟ

ಪಶ್ಚಿಮ ಪದವೀಧರ ಚುನಾವಣೆಗೆ ಹಾಲಿ ಸದಸ್ಯ ಎಸ್ ವಿ ಸಂಕನೂರರಿಗೆ ಮತ್ತೆ ಬಿಜೆಪಿ ಟಿಕೇಟ್ ಘೋಷಣೆ ಮಾಡಿದ ಬೆನ್ನಲ್ಲೇ ಪಕ್ಷದಲ್ಲಿ ಭಿನ್ನಮತ ಸ್ಫೋಟಗೊಂಡಿದೆ.

ಪಶ್ಚಿಮ ಪದವೀಧರ ಕ್ಷೇತ್ರಕ್ಕೆ ಪ್ರಮುಖ ಹಾಗೂ ಪ್ರಭಲ ಅಕಾಂಕ್ಷಿಯಾಗಿದ್ದ ರಾಜ್ಯ ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಕಳೆದ 37 ವರ್ಷಗಳಿಂದ ಶಿಸ್ತಿನ ಸಿಪಾಯಿಯಾಗಿ ಕೆಲಸ ಮಾಡಿದ್ದ ನನಗೆ ಈ ಸಲ ಪದವೀಧರ ಕ್ಷೇತ್ರಕ್ಕೆ ಟಿಕೇಟ್ ನೀಡುತ್ತಾರೆ ಎಂದು ಭರವಸೆ ಇಟ್ಟುಕೊಂಡಿದ್ದೆ, ಆದರೆ ಕೊಡದೆ ನಿರ್ಲಕ್ಷ ಮಾಡಿದ್ದು, ಬೇಸರ ತಂದಿದೆ ಎಂದು ಪಾಟೀಲ ಅವರು ತಮ್ಮ ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ.

ಇದರಿಂದಾಗಿ ಬಿಜೆಪಿ ಅಭ್ಯರ್ಥಿ ಎಸ್ ವಿ ಸಂಕನೂರ ಅವರಿಗೆ ಇದೀಗ ಸಂಕಷ್ಟ ಎದುರಾಗಿದೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ನವಲಗುಂದ ನರಗುಂದ ರೈತ ಬಂಡಾಯಕ್ಕೆ 46 ವರ್ಷ ಪೂರ್ಣ : ರೈತರ ಪಾದಕ್ಕೆ ಶರಣಾಗಿದ್ದ ಕಾಂಗ್ರೇಸ್ ಸರ್ಕಾರ : ಅಂದು ನಡೆದಿದ್ದು ಏನು? ಇಲ್ಲಿದೆ ಡಿಟೇಲ್ ಸ್ಟೋರಿ

ನವಲಗುಂದ ನರಗುಂದ ರೈತ ಬಂಡಾಯ ನಡೆದು ಇವತ್ತಿಗೆ 46 ವರ್ಷಗಳು ಪೂರ್ಣಗೊಂಡಿವೆ. ಪ್ರತಿ ವರ್ಷ ಜುಲೈ 21 ರಂದು ರೈತರು, ಈ ದಿನವನ್ನು ರೈತ ಹುತಾತ್ಮ ದಿನಾಚರಣೆ

Live Cricket

error: Content is protected !!