Download Our App

Follow us

Home » ಕರ್ನಾಟಕ » ಧಾರವಾಡ ಜಿಲ್ಲೆಯ ಹಳ್ಳಿಗಳಲ್ಲಿ ಕುಡಿಯಲು ನೀರು ಇಲ್ಲದಿದ್ದರೆ ಈ ನಂಬರಿಗೆ ಕರೆ ಮಾಡಿ

ಧಾರವಾಡ ಜಿಲ್ಲೆಯ ಹಳ್ಳಿಗಳಲ್ಲಿ ಕುಡಿಯಲು ನೀರು ಇಲ್ಲದಿದ್ದರೆ ಈ ನಂಬರಿಗೆ ಕರೆ ಮಾಡಿ

ಬೇಸಿಗೆ ಆರಂಭವಾಗಿದ್ದು, ಧಾರವಾಡ ಜಿಲ್ಲೆಯ ಕೆಲ ಹಳ್ಳಿಗಳಲ್ಲಿ ಕುಡಿಯಲು ನೀರಿನ ಕೊರತೆ ಎದ್ದು ಕಾಣುತ್ತಿದೆ. 

ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಕುಡಿಯುವ ನೀರಿನ ಸಹಾಯವಾಣಿ ಆರಂಭ ಮಾಡಲಾಗಿದೆ.

ಗ್ರಾಮೀಣ ಪ್ರದೇಶದ ಸಾರ್ವಜನಿಕರಿಗೆ ಸಮಸ್ಯೆ ಉಂಟಾದಲ್ಲಿ ತಮ್ಮನ್ನು ಸಂಪರ್ಕಿಸುವಂತೆ ಜಿಪಂ ಸಿಇಓ ಮನವಿ ಮಾಡಿದ್ದಾರೆ.

ಧಾರವಾಡ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಬೇಸಿಗೆ ಕಾಲದ ಹಿನ್ನಲೆಯಲ್ಲಿ ಕುಡಿಯುವ ನೀರಿನ ಅಭಾವ ಉಂಟಾಗದಂತೆ ಅಗತ್ಯ ಕ್ರಮವಹಿಸಲು ಮತ್ತು ಕಚೇರಿಗೆ ಸ್ವೀಕೃತವಾಗುವ ದೂರಗಳನ್ನು ಇತ್ಯರ್ಥಗೊಳಿಸಲು ಸಹಾಯವಾಣಿ ಕೇಂದ್ರ ಆರಂಭಿಸಲಾಗಿದ್ದು, ಸಾರ್ವಜನಿಕರು ಸಂಪರ್ಕಿಸಬಹುದು ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ಅವರು ತಿಳಿಸಿದ್ದಾರೆ. 

ಈ ಕುರಿತು ಪ್ರಕಟಣೆ ನೀಡಿರುವ ಅವರು, ಜಿಲ್ಲಾ ಪಂಚಾಯತದಲ್ಲಿ ಸ್ಥಾಪಿತವಾಗಿರುವ ಸಹಾಯವಾಣಿ ಕೇಂದ್ರಕ್ಕೆ 0836-2742221 ಗೆ ಸಾರ್ವಜನಿಕರು ಕರೆ ಮಾಡಿ, ಸಂಪರ್ಕಿಸಬಹುದಾಗಿದೆ.

ಧಾರವಾಡ ಜಿಲ್ಲಾ ಪಂಚಾಯತ ಕಚೇರಿಗೆ ಸ್ವೀಕೃತವಾಗುವ ದೂರುಗಳನ್ನು ಪರಿಶೀಲಿಸಿ, ಇತ್ಯರ್ಥಪಡಿಸಲು ಕ್ರಮವಹಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. 

ಸಹಾಯವಾಣಿ ಕೇಂದ್ರಕ್ಕೆ ಸೋಮವಾರದಿಂದ ರವಿವಾರದವರೆಗೆ ವಾರದ ಏಳು ದಿನ ಕರ್ತವ್ಯ ನಿರ್ವಹಿಸಲು ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ.

ನೋಡಲ್ ಅಧಿಕಾರಿಗಳನ್ನಾಗಿ ಜಿಲ್ಲಾ ಪಂಚಾಯತ ಸಹಾಯಕ ಕಾರ್ಯದರ್ಶಿ ಅಜಯ ಎನ್. ಅವರನ್ನು ನೇಮಿಸಲಾಗಿದೆ ಎಂದು ಅವರು ಹೇಳಿದ್ದಾರೆ. 

ಧಾರವಾಡ ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾದಲ್ಲಿ ತಕ್ಷಣ ಸ್ಪಂದಿಸಲು ಎಲ್ಲ ತಾಲೂಕಾ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಹಾಗೂ ಎಲ್ಲ ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಲಾಗಿದೆ. ಮತ್ತು ತಾಲೂಕಾ ಮಟ್ಟದಲ್ಲಿ ಸಹಾಯವಾಣಿ ಕೇಂದ್ರಗಳನ್ನು ತೆರೆಯಲು ಆದೇಶಿಸಲಾಗಿದೆ. 

ಆದ್ದರಿಂದ ಸಾರ್ವಜನಿಕರು ಕುಡಿಯುವ ನೀರು ಹಾಗೂ ಇತರ ಸಮಸ್ಯೆಗಳಿದ್ದಲ್ಲಿ ಜಿಲ್ಲಾ ಪಂಚಾಯತ ಅಥವಾ ತಾಲೂಕಾ ಪಂಚಾಯತ ಕಚೇರಿಗಳಲ್ಲಿ ಆರಂಭಿಸಿರುವ ಸಹಾಯವಾಣಿ ಕೇಂದ್ರಗಳಿಗೆ ಕರೆ ಮಾಡಿ, ಸಮಸ್ಯೆಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದು ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ಅವರು ತಿಳಿಸಿದ್ದಾರೆ. 

Karnataka Files
Author: Karnataka Files

Leave a Comment

RELATED LATEST NEWS

Top Headlines

ನವಲಗುಂದದ ಪಂಚಗೃಹ ಹಿರೇಮಠದಲ್ಲಿ ಇಂದು ಇಫ್ತಾರ್ ಕೂಟ. ಭಾವೈಕ್ಯತೆಯ ಬೆಸುಗೆ ಬೆಸೆದ ಶ್ರೀಗಳು

ನವಲಗುಂದದ ಪಂಚಗ್ರಹ ಹಿರೇಮಠದಲ್ಲಿ ಇಂದು ಪವಿತ್ರ ರಮಜಾನ್ ಹಬ್ಬದ ಹಿನ್ನೆಲೆಯಲ್ಲಿ ಮುಸ್ಲಿಮ್ ಭಾಂದವರಿಗೆ ಇಫ್ತಾರ್ ಕೂಟ ಏರ್ಪಡಿಸಲಾಗಿದೆ. ಜಾತಿ ಜಾತಿಗಳ ಮಧ್ಯೆ ಸಂಘರ್ಷಗಳು, ಅಸೂಯೆ, ದ್ವೇಷ ಹರಡುತ್ತಿರುವ

Live Cricket

error: Content is protected !!