Download Our App

Follow us

Home » ಕಾನೂನು » ಧಾರವಾಡ : ಜೋರಾಯ್ತು ಪ್ರತ್ತೈಕ್ ಪಾಲಿಕೆ ಕಿಚ್ಚು / ದಲಿತ ಸಂಘಟನೆಗಳಿಂದ ಅರೆಬೆತ್ತಲೆ ಮೆರವಣಿಗೆ

ಧಾರವಾಡ : ಜೋರಾಯ್ತು ಪ್ರತ್ತೈಕ್ ಪಾಲಿಕೆ ಕಿಚ್ಚು / ದಲಿತ ಸಂಘಟನೆಗಳಿಂದ ಅರೆಬೆತ್ತಲೆ ಮೆರವಣಿಗೆ

ಹೋರಾಟದ ನೆಲ ಧಾರವಾಡದಲ್ಲಿ ಪ್ರತ್ತೈಕ್ ಪಾಲಿಕೆಯ ಹೋರಾಟ ತೀವ್ರಗೊಂಡಿದೆ.

ಕನ್ನಡ ನೆಲ, ಜಲ, ಭಾಷೆಯ ವಿಚಾರದಲ್ಲಿ ಸರ್ಕಾರಗಳನ್ನು ಅಲುಗಾಡಿಸಿದ ನೆಲದಲ್ಲಿ ವಿವಿಧ ದಲಿತ ಸಂಘಟನೆಗಳು ಇಂದು ಪ್ರತ್ತೈಕ್ ಪಾಲಿಕೆಗೆ ಆಗ್ರಹಿಸಿ ಬೃಹತ್ ಅರೆಬೆತ್ತಲೆ ಮೆರವಣಿಗೆ ನಡೆಸಿದರು.

ಎಲ್ಲರಿಗೂ ಸಮಾನ ಹಕ್ಕು ನೀಡಿದ ಸಂವಿಧಾನ ಶಿಲ್ಪಿ ಡಾ, ಬಾಬಾಸಾಹೇಬ ಅಂಬೇಡ್ಕರ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ಆರಂಭವಾದ ಮೆರವಣಿಗೆ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು.

ಪರಮೇಶ್ವರ ಕಾಳೆ ಹಾಗೂ ತುಳಜಪ್ಪ ಪೂಜಾರಿ ನೇತೃತ್ವದಲ್ಲಿ ನಡೆದ ಮೆರವಣಿಗೆಯಲ್ಲಿ ಸುಮಾರು 500 ಕ್ಕೂ ಹೆಚ್ಚು ಜನ ಭಾಗವಹಿಸಿದ್ದರು.

ಬಿಜೆಪಿಯ ಕುತಂತ್ರದಿಂದ ಪ್ರತ್ತೈಕ್ ಪಾಲಿಕೆಗೆ ಅಡ್ಡಿಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ಕೂಡಲೇ ರಾಜ್ಯಪಾಲರು ಅಂಕಿತ ಹಾಕುವಂತೆ ಆಗ್ರಹಿಸಿದರು.

ಮೆರವಣಿಗೆ ಬಳಿಕ ಪ್ರತಿಭಟನಾಕಾರರು ಧರಣಿ ಸತ್ಯಾಗ್ರಹದಲ್ಲಿ ಭಾಗವಹಿಸಿದ್ದು, ಪ್ರತ್ತೈಕ್ ಪಾಲಿಕೆ ಹೋರಾಟದ ಕಿಚ್ಚು ದಿನೇ ದಿನೇ ಹೆಚ್ಚಾಗುತ್ತಿದೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ನವಲಗುಂದ ನರಗುಂದ ರೈತ ಬಂಡಾಯಕ್ಕೆ 46 ವರ್ಷ ಪೂರ್ಣ : ರೈತರ ಪಾದಕ್ಕೆ ಶರಣಾಗಿದ್ದ ಕಾಂಗ್ರೇಸ್ ಸರ್ಕಾರ : ಅಂದು ನಡೆದಿದ್ದು ಏನು? ಇಲ್ಲಿದೆ ಡಿಟೇಲ್ ಸ್ಟೋರಿ

ನವಲಗುಂದ ನರಗುಂದ ರೈತ ಬಂಡಾಯ ನಡೆದು ಇವತ್ತಿಗೆ 46 ವರ್ಷಗಳು ಪೂರ್ಣಗೊಂಡಿವೆ. ಪ್ರತಿ ವರ್ಷ ಜುಲೈ 21 ರಂದು ರೈತರು, ಈ ದಿನವನ್ನು ರೈತ ಹುತಾತ್ಮ ದಿನಾಚರಣೆ

Live Cricket

error: Content is protected !!