Download Our App

Follow us

Home » ಅಪಘಾತ » ಯಲ್ಲಾಪುರ ಬಳಿ ಭೀಕರ ಅಪಘಾತ / ಧಾರವಾಡ ಮೂಲದ 6 ಜನರ ಸಾವು

ಯಲ್ಲಾಪುರ ಬಳಿ ಭೀಕರ ಅಪಘಾತ / ಧಾರವಾಡ ಮೂಲದ 6 ಜನರ ಸಾವು

ಯಲ್ಲಾಪುರ ಬಳಿ ಬೆಳ್ಳಂಬೆಳಗ್ಗೆ ಜವರಾಯ ಅಟ್ಟಹಾಸ ಮೆರೆದಿದ್ದಾನೆ.

ಲಾರಿ ಮತ್ತು ಕ್ರುಸರ್ ವಾಹನ ನಡುವೆ ಡಿಕ್ಕಿ ಸಂಭವಿಸಿ, ಸ್ಥಳದಲ್ಲೆ ಆರು ಜನ ಸಾವನ್ನಪ್ಪಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಆರತಿ ಬೈಲ್ ಘಟ್ಟದಲ್ಲಿ ಈ ದುರ್ಘಟನೆ ನಡೆದಿದೆ.

ಮೃತರು ಧಾರವಾಡ ಮೂಲದವರು ಎನ್ನಲಾಗಿದೆ. ಮೃತರನ್ನು ಸಂಜೀವ, ಬಸವರಾಜ, ಅಭಿಷೇಕ, ಈಶ್ವರ, ಅಭಿಷೇಷ, ಅಕ್ಷಯ ಎಂದು ಗುರುತಿಸಲಾಗಿದೆ.

ಕ್ರೂಸರ್ ವಾಹನದಲ್ಲಿ ಒಟ್ಟು ಒಂಬತ್ತು ಜನ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. 

ಈ ಪೈಕಿ ಮೂವರಿಗೆ ಗಂಭೀರ ಗಾಯಗಳಾಗಿವೆ. ಧಾರವಾಡದಿಂದ ಅಂಕೋಲಾ ಕಡೆ ಕ್ರುಸರ್ ವಾಹನ ಹೊರಟಿತ್ತು ಎನ್ನಲಾಗಿದೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ನವಲಗುಂದ ವಿಧಾನಸಭಾ ಕ್ಷೇತ್ರದ ಮೂರು ತಾಲೂಕು ಬರಪೀಡಿತ ಘೋಷಣೆ: ಧಾರವಾಡ ತಾಲೂಕು ನಿರ್ಲಕ್ಷ್ಯ ಆರೋಪ

ನವಲಗುಂದ: ಮಳೆ ಅಭಾವದ ಹಿನ್ನೆಲೆಯಲ್ಲಿ ಸರ್ಕಾರ ಎರಡನೇ ಹಂತದಲ್ಲಿ ರಾಜ್ಯದ 24 ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಿಸಿದ್ದು, ಧಾರವಾಡ ಜಿಲ್ಲೆಯ ನವಲಗುಂದ, ಅಣ್ಣಿಗೇರಿ ಹಾಗೂ ಹುಬ್ಬಳ್ಳಿ ತಾಲೂಕುಗಳು

Live Cricket

error: Content is protected !!