ಧಾರವಾಡ ನಗರದ ಕೆಎಂಎಫ್ ಬಳಿಯ ಬಸವೇಶ್ವರ ಬಡಾವಣೆಯಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ ಮಹಿಳೆಯ ಮನೆಗೆ ಅಪರಿಚಿತ ವ್ಯಕ್ತಿಯೊಬ್ಬ ನುಗ್ಗಿದ ಘಟನೆ ನಡೆದಿದೆ.
ಮನೆಗೆ ನುಗ್ಗಿದ ವ್ಯಕ್ತಿಯನ್ನು ಪಶ್ಚಿಮ ಬಂಗಾಳ ಮೂಲದ ಪ್ರಭೋನ್ ಬಿಸ್ವಾಸ್ ಎಂದು ಗುರುತಿಸಲಾಗಿದೆ. ಸ್ಥಳೀಯರು ಆತನನ್ನು ಹಿಡಿದು ಕಂಬಕ್ಕೆ ಕಟ್ಟಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಬಳಿಕ ಸ್ಥಳಕ್ಕೆ ಆಗಮಿಸಿದ ವಿದ್ಯಾಗಿರಿ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಕಳೆದ ಒಂದು ವಾರದಲ್ಲಿ ಇದೇ ಬಸವೇಶ್ವರ ಬಡಾವಣೆಯಲ್ಲಿ ಮೂರು ಕಳ್ಳತನ ಪ್ರಕರಣಗಳು ವರದಿಯಾಗಿದ್ದು, ಈ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.
Author: Karnataka Files
Post Views: 815





