ಮಾಜಿ ಪ್ರಧಾನಮಂತ್ರಿ ಹೆಚ್. ಡಿ. ದೇವೇಗೌಡ ಅವರ ಧರ್ಮಪತ್ನಿ ಹಾಗೂ ಕೇಂದ್ರ ಸಚಿವ ಹೆಚ್. ಡಿ. ಕುಮಾರಸ್ವಾಮಿ ಅವರ ಮಾತೋಶ್ರೀ ಶ್ರೀಮತಿ ಚೆನ್ನಮ್ಮ ದೇವೇಗೌಡ ಅವರ ನಿಧನಕ್ಕೆ ಮಾಜಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಕಂಬನಿ ಮಿಡಿದಿದ್ದಾರೆ.
ಚೆನ್ನಮ್ಮ ಅವರು ಆದರ್ಶ ಗೃಹಿಣಿಯಾಗಿ, ಸರಳತೆಯ ಸಾಕಾರ ಮೂರ್ತಿಯಾಗಿ ಇಡೀ ಕುಟುಂಬಕ್ಕೆ ದೊಡ್ಡ ಶಕ್ತಿಯಾಗಿದ್ದರು. ದೇಶದ ಅತ್ಯುನ್ನತ ರಾಜಕೀಯ ಕುಟುಂಬದ ಭಾಗವಾಗಿದ್ದರೂ, ಅವರ ನಮ್ರತೆ ಮತ್ತು ಮಮತಾಮಯಿ ವ್ಯಕ್ತಿತ್ವ ಎಲ್ಲರಿಗೂ ಮಾದರಿಯಾಗಿತ್ತು. ಅವರ ಅಗಲಿಕೆ ಗೌಡರ ಕುಟುಂಬಕ್ಕೆ ಹಾಗೂ ಅವರ ಅಭಿಮಾನಿ ಬಳಗಕ್ಕೆ ತುಂಬಲಾರದ ನಷ್ಟವಾಗಿದೆ,” ಎಂದು ಕಂಬನಿ ಮಿಡಿದಿದ್ದಾರೆ.
”ಭಗವಂತನು ಮೃತರ ಆತ್ಮಕ್ಕೆ ಸದ್ಗತಿಯನ್ನು ಕರುಣಿಸಲಿ. ಮಾನ್ಯ ಹೆಚ್. ಡಿ. ದೇವೇಗೌಡರು, ಹೆಚ್. ಡಿ. ಕುಮಾರಸ್ವಾಮಿ ಹಾಗೂ ಅವರ ಒಟ್ಟು ಕುಟುಂಬಸ್ಥರಿಗೆ ಈ ತೀವ್ರ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲಿ” ಎಂದು ಶಂಕರ ಪಾಟೀಲ ಮುನೇನಕೊಪ್ಪ ಪ್ರಾರ್ಥಿಸಿದ್ದಾರೆ.
Author: Karnataka Files
Post Views: 160




