Download Our App

Follow us

Home » ಕಾನೂನು » ಮಾದಿಗ ಜನಾಂಗದ ಆಕ್ರೋಶ : ಧಾರವಾಡ ಜಿಲ್ಲಾಧಿಕಾರಿ ಕೊಠಡಿಗೆ ನುಗ್ಗಿದ ಪ್ರತಿಭಟನಾಕಾರರು

ಮಾದಿಗ ಜನಾಂಗದ ಆಕ್ರೋಶ : ಧಾರವಾಡ ಜಿಲ್ಲಾಧಿಕಾರಿ ಕೊಠಡಿಗೆ ನುಗ್ಗಿದ ಪ್ರತಿಭಟನಾಕಾರರು 

ಅಳ್ನಾವರ ತಾಲೂಕಿನ ಕುಂಬಾರಗೊಪ್ಪ ಗ್ರಾಮದಲ್ಲಿ ನಿಂಗಪ್ಪ ಮಾದರ ಎಂಬ ದಲಿತ ವ್ಯಕ್ತಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾದಿಗ ಸಮುದಾಯದವರು ಧಾರವಾಡದಲ್ಲಿಂದು ಬೃಹತ್ ಪ್ರತಿಭಟನೆ ನಡೆಸಿದರು.

2025 ರ ಸೆಪ್ಟೆಂಬರ್ ನಲ್ಲಿ ಕೊಲೆಯಾದರು ಇಲ್ಲಿಯವರೆಗೆ ಆರೋಪಿಗಳನ್ನು ಬಂಧಿಸದ ಹಿನ್ನೆಲೆಯಲ್ಲಿ ಪ್ರತಿಭಟನೆ ನಡೆಯಿತು. 

ಧಾರವಾಡ ಜಿಲ್ಲಾಧಿಕಾರಿ ಕಚೇರಿಯ ಮುಖ್ಯ ಗೇಟ್ ತಳ್ಳಿ ಪ್ರತಿಭಟನಾಕಾರರು ಡಿಸಿ ಕೊಠಡಿ ಒಳಗೆ ನುಗ್ಗಿದರು.

ನೂರಾರು ಜನ ಏಕಾಏಕಿ ಜಿಲ್ಲಾಧಿಕಾರಿ ಕೊಠಡಿಗೆ ನುಗ್ಗಿದ್ದರಿಂದ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.

ಮಾಜಿ ಸಚಿವ ಅಲ್ಕೋಡ ಹನುಮಂತಪ್ಪ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ 500 ಕ್ಕೂ ಹೆಚ್ಚು ಜನ ಭಾಗವಹಿಸಿದ್ದರು.

Karnataka Files
Author: Karnataka Files

Leave a Comment

RELATED LATEST NEWS

Top Headlines

ನವಲಗುಂದ ವಿಧಾನಸಭಾ ಕ್ಷೇತ್ರದ ಮೂರು ತಾಲೂಕು ಬರಪೀಡಿತ ಘೋಷಣೆ: ಧಾರವಾಡ ತಾಲೂಕು ನಿರ್ಲಕ್ಷ್ಯ ಆರೋಪ

ನವಲಗುಂದ: ಮಳೆ ಅಭಾವದ ಹಿನ್ನೆಲೆಯಲ್ಲಿ ಸರ್ಕಾರ ಎರಡನೇ ಹಂತದಲ್ಲಿ ರಾಜ್ಯದ 24 ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಿಸಿದ್ದು, ಧಾರವಾಡ ಜಿಲ್ಲೆಯ ನವಲಗುಂದ, ಅಣ್ಣಿಗೇರಿ ಹಾಗೂ ಹುಬ್ಬಳ್ಳಿ ತಾಲೂಕುಗಳು

Live Cricket

error: Content is protected !!