ಹುಬ್ಬಳ್ಳಿ–ಧಾರವಾಡ ಅವಳಿ ನಗರದ ಕುಡಿಯುವ ನೀರಿನ ನಿರ್ವಹಣೆಯ ಹೊಣೆಯನ್ನು ಎಲ್ ಆಂಡ್ ಟಿ ಕಂಪನಿಗೆ ವಹಿಸಲಾಗಿದ್ದು, ಗ್ರಾಹಕರಿಗೆ ಅವೈಜ್ಞಾನಿಕವಾಗಿ ನೀರಿನ ಬಿಲ್ಲುಗಳನ್ನು ನೀಡುತ್ತಿರುವ ಬಗ್ಗೆ ಧಾರವಾಡ ಗ್ರಾಮೀಣ ಶಾಸಕ ವಿನಯ ಕುಲಕರ್ಣಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಪ್ರಗತಿ ಪರಿಶೀಲನಾ ಸಭೆಯಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿದ ಅವರು, ಸಕಾಲಕ್ಕೆ ನೀರಿನ ಕರ ಪಾವತಿಸದ ಗ್ರಾಹಕರ ಮೇಲೆ ಹೆಚ್ಚಿನ ಬಡ್ಡಿ ವಿಧಿಸಲಾಗುತ್ತಿದೆ ಎಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ನೀರಿನ ಕರದ ಮೇಲಿನ ಬಡ್ಡಿಯನ್ನು ಮನ್ನಾ ಮಾಡಬೇಕು ಎಂದು ಆಗ್ರಹಿಸಿದ ಶಾಸಕ ವಿನಯ ಕುಲಕರ್ಣಿ, ಈ ಕುರಿತು ಅಗತ್ಯ ಕ್ರಮ ಕೈಗೊಳ್ಳುವಂತೆ ಪಾಲಿಕೆ ಆಯುಕ್ತರಿಗೆ ಸೂಚನೆ ನೀಡಿದರು.
ಅಲ್ಲದೆ, ಧಾರವಾಡ ನಗರದ ಜನತೆಗೆ ಸಮರ್ಪಕ ಹಾಗೂ ನಿರಂತರವಾಗಿ ಕುಡಿಯುವ ನೀರು ಪೂರೈಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
Author: Karnataka Files
Post Views: 318




