Download Our App

Follow us

Home » ಕಾನೂನು » ಹುಬ್ಬಳ್ಳಿ : ಸಾರ್ವಜನಿಕ ಬಡಾವಣೆಯಲ್ಲಿ ರೈತರ ಹೋರಾಟಕ್ಕೆ ಅವಕಾಶ ನಿರಾಕರಿಸಿದ ಹೈಕೋರ್ಟ್ : ನಿಗದಿತ ಸ್ಥಳದಲ್ಲಿ ಮಾಡಲು ಅಭ್ಯಂತರವಿಲ್ಲ

ಹುಬ್ಬಳ್ಳಿ : ಸಾರ್ವಜನಿಕ ಬಡಾವಣೆಯಲ್ಲಿ ರೈತರ ಹೋರಾಟಕ್ಕೆ ಅವಕಾಶ ನಿರಾಕರಿಸಿದ ಹೈಕೋರ್ಟ್ : ನಿಗದಿತ ಸ್ಥಳದಲ್ಲಿ ಮಾಡಲು ಅಭ್ಯಂತರವಿಲ್ಲ

ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಮನೆಗೆ ಮುತ್ತಿಗೆ ಹಾಕಲು ರೈತರು ನಿರ್ಧರಿಸಿರುವ ಹಿನ್ನೆಲೆಯಲ್ಲಿ, ಸಾರ್ವಜನಿಕರಿಗೆ ತೊಂದರೆಯಾಗುತ್ತದೆ ಎಂದು ಆಕ್ಷೇಪ ವ್ಯಕ್ತಪಡಿಸಿದ ಹುಬ್ಬಳ್ಳಿಯ ಮಯೂರ ಬಡಾವಣೆ ನಿವಾಸಿಗಳು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ.

ಈ ಅರ್ಜಿಯ ವಿಚಾರಣೆ ನಡೆಸಿದ ಬೆಂಗಳೂರಿನ ಹೈಕೋರ್ಟ್ ದ್ವಿಸದಸ್ಯ ಪೀಠವು, ರೈತರ ಮುತ್ತಿಗೆ ನಿರ್ಧಾರಕ್ಕೆ ನಿರ್ಬಂಧ ವಿಧಿಸಿದೆ ಎಂದು ತಿಳಿದುಬಂದಿದೆ.

ಹುಬ್ಬಳ್ಳಿಯ ಮಯೂರ ಬಡಾವಣೆ ನಿವಾಸಿ ಸಂಗಮ ಹಂಜಿ ಸೇರಿದಂತೆ ಬಡಾವಣೆಯ ನಾಗರಿಕರು, ರೈತರು ವಸತಿ ಪ್ರದೇಶದಲ್ಲಿ ಮುತ್ತಿಗೆ ಹಾಗೂ ಪ್ರತಿಭಟನೆ ನಡೆಸುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗುವ ಸಾಧ್ಯತೆಯಿದೆ ಎಂದು ನ್ಯಾಯಾಲಯದ ಗಮನಕ್ಕೆ ತಂದಿದ್ದರು.

ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್‌ನ ದ್ವಿಸದಸ್ಯ ಪೀಠದ ನ್ಯಾಯಮೂರ್ತಿಗಳಾದ ಕೆ. ಎಸ್. ಭರತಕುಮಾರ ಹಾಗೂ ಅನು ಶಿವರಾಮ ಅವರು, ಸಾರ್ವಜನಿಕ ಬಡಾವಣೆಗಳಲ್ಲಿ ಪ್ರತಿಭಟನೆ ನಡೆಸಲು ಅವಕಾಶವಿಲ್ಲ ಎಂಬ ನಿಲುವಿನೊಂದಿಗೆ ಆದೇಶ ನೀಡಿದ್ದಾರೆ ಎಂದು ತಿಳಿದುಬಂದಿದೆ.

ನಿಗದಿತ ಸ್ಥಳದಲ್ಲಿ ಪ್ರತಿಭಟನೆ ನಡೆಸಲು ಅವಕಾಶ

ಪ್ರತಿಭಟನೆ ನಡೆಸುವುದು ಪ್ರಜಾಪ್ರಭುತ್ವದ ಹಕ್ಕಾಗಿದ್ದರೂ, ಅದರಿಂದ ಸಾರ್ವಜನಿಕರಿಗೆ ತೊಂದರೆಯಾಗಬಾರದು. ಪ್ರತಿಭಟನೆ ನಡೆಸಲು ನಿಗದಿಪಡಿಸಿದ ಸ್ಥಳಗಳಲ್ಲಿ ಹೋರಾಟ ನಡೆಸಬಹುದೇ ಹೊರತು, ಸಾರ್ವಜನಿಕ ವಸತಿ ಬಡಾವಣೆಗಳಲ್ಲಿ ಮುತ್ತಿಗೆ ಅಥವಾ ಪ್ರತಿಭಟನೆ ನಡೆಸಲು ಅವಕಾಶವಿಲ್ಲ ಎಂಬ ಅಂಶವನ್ನು ನ್ಯಾಯಾಲಯದ ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ ಎನ್ನಲಾಗಿದೆ

ಈ ಬೆಳವಣಿಗೆಯಿಂದ ಪ್ರಲ್ಹಾದ ಜೋಶಿ ಅವರ ಮನೆಗೆ ಮುತ್ತಿಗೆ ಹಾಕಲು ಮುಂದಾಗಿದ್ದ ರೈತರ ನಿರ್ಧಾರಕ್ಕೆ ಕಾನೂನಾತ್ಮಕ ತಡೆ ಎದುರಾದಂತಾಗಿದೆ.

 

 

Karnataka Files
Author: Karnataka Files

Leave a Comment

RELATED LATEST NEWS

Top Headlines

ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಮ್ಯಾ ರೆಡ್ಡಿ ರಾಜೀನಾಮೆ ಸಂಪುಟದಲ್ಲಿ ಮಹಿಳಾ ಸಚಿವರಿಗೆ ಸ್ಥಾನವಿಲ್ಲದ್ದಕ್ಕೆ ಅಸಮಾಧಾನ?

ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಮ್ಯಾ ರೆಡ್ಡಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂಬ ಸುದ್ದಿ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಕಳೆದ ಎರಡು ವರ್ಷಗಳಿಂದ ರಾಜ್ಯ

Live Cricket

error: Content is protected !!