ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಕುಮಾರ್ ಶೆಟ್ಟಿ ಬಣ) ವತಿಯಿಂದ 71ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ನವಲಗುಂದ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ, ರೋಗಿಗಳಿಗೆ ಹಣ್ಣು-ಹಂಪಲು ವಿತರಿಸುವ ಮೂಲಕ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಕಾರ್ಯಕ್ರಮಕ್ಕೂ ಮುನ್ನ ಪಟ್ಟಣದ ಲಿಂಗರಾಜ ಸರ್ಕಲ್ನಿಂದ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ಬೈಕ್ ರಾಲಿ ನಡೆಸಿ, ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ, ಕನ್ನಡ ನಾಡು, ನುಡಿ, ಭಾಷೆ ಹಾಗೂ ಸಂಸ್ಕೃತಿಯ ಬಗ್ಗೆ ಜಾಗೃತಿ ಮೂಡಿಸಿದರು.
ನಂತರ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿದ ವೇದಿಕೆಯ ಪದಾಧಿಕಾರಿಗಳು ರೋಗಿಗಳಿಗೆ ಹಣ್ಣು-ಹಂಪಲು ವಿತರಿಸಿ, ಅವರ ಆರೋಗ್ಯವನ್ನು ವಿಚಾರಿಸಿದರು. ಕನ್ನಡ ನಾಡಿನ ಹಬ್ಬವನ್ನು ಕೇವಲ ಸಂಭ್ರಮಕ್ಕೆ ಸೀಮಿತಗೊಳಿಸದೆ, ಸೇವಾ ಕಾರ್ಯಗಳ ಮೂಲಕ ಆಚರಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಈ ಸಂದರ್ಭದಲ್ಲಿ ಬೆಳಗಾವಿ ವಿಭಾಗದ ಯುವ ಘಟಕದ ಅಧ್ಯಕ್ಷ ಸಿರಾಜ್ ಧಾರವಾಡ ಅಭಿಪ್ರಾಯಪಟ್ಟರು.
ಈ ಸಂದರ್ಭದಲ್ಲಿ ನವಲಗುಂದ ತಾಲೂಕಾಧ್ಯಕ್ಷರಾದ ಪ್ರಕಾಶ್ ಗೊಂದಳಿ, ನವಲಗುಂದ ನಗರ ಘಟಕದ ಅಧ್ಯಕ್ಷರಾದ ಅಹಮದ್ ಶಿರಹಟ್ಟಿ, ಗೌರವ ಅಧ್ಯಕ್ಷರು ಎಮ್ ಎ ಕೊಪ್ಪಳ, ದಾದಾಪಿರ ಬೆಪಾರಿ, ಅನ್ವರ್ ಹುಸೇನ್ ಮುಳಿಮನಿ, ಜಾಹುರ ಕತಿಬ್, ಕಮಲ್ ಸಾಬ್, ಅಭಿಷೇಕ್, ಸಂತೋಷ, ಸದ್ದಾಂ, ತೌಸೀಫ್, ಇಮ್ರಾನ್, ಮಂಜುನಾಥ, ಸೇರಿದಂತೆ ಕರ್ನಾಟಕ ರಕ್ಷಣಾ ವೇದಿಕೆಯ ಪದಾಧಿಕಾರಿಗಳು ಹಾಗೂ ಅಪಾರ ಸಂಖ್ಯೆಯಲ್ಲಿ ಕಾರ್ಯಕರ್ತರು ಉಪಸ್ಥಿತರಿದ್ದರು.




