Download Our App

Follow us

Home » ಕಾನೂನು » ಪೋಷಕರನ್ನು ನಿರ್ಲಕ್ಷಿಸುವ ಸರ್ಕಾರಿ ನೌಕರರ ವೇತನ ಕಡಿತಗೊಳಿಸಲು ತೆಲಂಗಾಣ ಸರ್ಕಾರ ನಿರ್ಧಾರ

ಪೋಷಕರನ್ನು ನಿರ್ಲಕ್ಷಿಸುವ ಸರ್ಕಾರಿ ನೌಕರರ ವೇತನ ಕಡಿತಗೊಳಿಸಲು ತೆಲಂಗಾಣ ಸರ್ಕಾರ ನಿರ್ಧಾರ

ಸರ್ಕಾರಿ ನೌಕರರು ತಮ್ಮ ಪೋಷಕರನ್ನು ನಿರ್ಲಕ್ಷಿಸಿದರೆ, ಅವರ ಸಂಬಳದ ಶೇಕಡಾ 10 ರಿಂದ 15 ರಷ್ಟು ಹಣವನ್ನು ಕಡಿತಗೊಳಿಸಿ ನಿರ್ಲಕ್ಷ್ಯಕ್ಕೊಳಗಾದ ಪೋಷಕರಿಗೆ ನೀಡುವ ಶಾಸನವನ್ನು ತೆಲಂಗಾಣ ಪರಿಚಯಿಸಲಿದೆ ಎಂದು ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ ಶನಿವಾರ ತಿಳಿಸಿದ್ದಾರೆ.

ಹೊಸದಾಗಿ ಆಯ್ಕೆಯಾದ ಗ್ರೂಪ್-II ಉದ್ಯೋಗಿಗಳಿಗೆ ನೇಮಕಾತಿ ಪತ್ರಗಳನ್ನು ಹಸ್ತಾಂತರಿಸುವ ಮೊದಲು ಸಭೆಯನ್ನುದ್ದೇಶಿಸಿ ಮಾತನಾಡಿದ ರೆಡ್ಡಿ, ಸಮಸ್ಯೆಗಳೊಂದಿಗೆ ತಮ್ಮ ಬಳಿಗೆ ಬರುವ ಜನರ ಬಗ್ಗೆ ಸಹಾನುಭೂತಿಯಿಂದ ವರ್ತಿಸುವಂತೆ ಒತ್ತಾಯಿಸಿದರು.

ನಾವು ಹೊಸ ಕಾನೂನನ್ನು ತರುತ್ತಿದ್ದೇವೆ ಎಂದ ಅವರು, ಸರ್ಕಾರಿ ನೌಕರರು ತಮ್ಮ ಪೋಷಕರನ್ನು ನಿರ್ಲಕ್ಷಿಸಿದರೆ, ಅವರ ಸಂಬಳದ ಶೇಕಡಾ 10 ರಿಂದ 15 ರಷ್ಟು ಹಣವನ್ನು ಕಡಿತಗೊಳಿಸಿ ಪೋಷಕರ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತದೆ ಎಂದರು.

ಶಾಸನವನ್ನು ರೂಪಿಸಲು ಅಧಿಕಾರಿಗಳ ಸಮಿತಿಯನ್ನು ರಚಿಸುವಂತೆ ರೆಡ್ಡಿ ಮುಖ್ಯ ಕಾರ್ಯದರ್ಶಿ ರಾಮಕೃಷ್ಣ ರಾವ್ ಅವರಿಗೆ ಮುಖ್ಯಮಂತ್ರಿ ರೇವಂತ್ ರೆಡ್ಡಿ ಸೂಚನೆ ನೀಡಿದ್ದಾರೆ.

Karnataka Files
Author: Karnataka Files

Leave a Comment

RELATED LATEST NEWS

error: Content is protected !!