ನವಲಗುಂದ ಶಾಸಕ ಎನ್ ಎಚ್ ಕೋನರೆಡ್ಡಿಯವರ ಮಗನ ಮದುವೆ ನಿನ್ನೇ ನಡೆಯಿತು.
ದಾಂಡೇಲಿ ಬಳಿ ಇರುವ ಖಾಸಗಿ ರೆಸಾರ್ಟ್ ನಲ್ಲಿ ಶಾಸಕ ಎನ್ ಎಚ್ ಕೋನರೆಡ್ಡಿಯವರ ಮಗ ನವೀನ ಕೋನರೆಡ್ಡಿ ದಾಂಪತ್ಯ ಜೀವನಕ್ಕೆ ಕಾಲಿಟ್ಟರು.

ಮೂರು ದಿನಗಳ ಕಾಲ ನಡೆದ ಮದುವೆ ಸಮಾರಂಭದಲ್ಲಿ ಕುಟುಂಬದವರು ನೂತನ ದಂಪತಿಗಳಿಗೆ ಆಶೀರ್ವದಿಸಿದರು.

ಮೆಹಂದಿ, ಅರಿಶಿನಶಾಸ್ತ್ರದ ಕಾರ್ಯಕ್ರಮ ಅಚ್ಚುಕಟ್ಟಾಗಿ ಹಾಗೂ ಅತ್ಯಂತ ಸರಳವಾಗಿ ನಡೆಯಿತು.

ಮಗನ ಮದುವೆ ಹಿನ್ನೆಲೆಯಲ್ಲಿ ಡಿಸೆಂಬರ್ 7 ರಂದು ನವಲಗುಂದದ ಮಾಡೆಲ್ ಹೈಸ್ಕೂಲ್ ಮೈದಾನದಲ್ಲಿ ಶಾಸಕ ಎನ್ ಎಚ್ ಕೋನರೆಡ್ಡಿಯವರು ಸಾಮೂಹಿಕ ಮದುವೆ ಹಮ್ಮಿಕೊಂಡಿದ್ದು 72 ಜೋಡಿಗಳ ಮದುವೆ ನಡೆಯಲಿದೆ ಎನ್ನಲಾಗಿದೆ.
ಸಾಮೂಹಿಕ ಮದುವೆ ಸಮಾರಂಭಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ ಸೇರಿದಂತೆ ಸಚಿವರು, ಶಾಸಕರುಗಳು ಭಾಗವಹಿಸುವ ನಿರೀಕ್ಷೆ ಇದೆ.
Author: Karnataka Files
Post Views: 454




