Download Our App

Follow us

Home » ಕರ್ನಾಟಕ » ಶಿವನೆಡೆಗೆ ಶಾಮನೂರು ಶಿವಶಂಕರಪ್ಪ ಪಯಣ

ಶಿವನೆಡೆಗೆ ಶಾಮನೂರು ಶಿವಶಂಕರಪ್ಪ ಪಯಣ

ದೇಶದ ಅತ್ಯಂತ ಹಿರಿಯ ಶಾಸಕರಾಗಿದ್ದ ದಾವಣಗೆರೆ ಧಣಿ ಶಾಮನೂರು ಶಿವಶಂಕರಪ್ಪನವರು ಇಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಕಾಂಗ್ರೇಸ್ಸಿನ ಕಟ್ಟಾಳುವಾಗಿದ್ದ ಅವರು ಪಕ್ಷದ ಖಜಾಂಚಿಯಾಗಿ ಪಕ್ಷ ಕಟ್ಟುವಲ್ಲಿ ದೊಡ್ಡ ಮಟ್ಟದ ಕೊಡುಗೆ ನೀಡಿದ್ದರು.

ದಾವಣಗೆರೆಯಿಂದ ಆರು ಸಲ ಶಾಸಕರಾಗಿ ಆಯ್ಕೆಯಾಗಿದ್ದ ಅವರು ದೇಶದ ಅತ್ಯಂತ ಹಿರಿಯ ಶಾಸಕ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು. 

ಅಖಿಲ ಭಾರತ ವೀರಶೈವ ಮಹಾಸಭೆಗೆ ರಾಷ್ಟ್ರೀಯ ಅಧ್ಯಕ್ಷರಾಗುವ ಮೂಲಕ, ಕೊಡುಗೈ ದಾನಿಯಾಗಿದ್ದ, ದಾವಣಗೆರೆ ಧಣಿ ಶಿವಶಂಕರಪ್ಪನವರು ನಾಡಿನಾದ್ಯಂತ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಿದ್ದರು. 

ಶಾಮನೂರು ಶಿವಶಂಕರಪ್ಪನವರ ಅಂತ್ಯಕ್ರಿಯೆ, ನಾಳೆ ದಾವಣಗೆರೆಯಲ್ಲಿ ಸಕಲ ಸರ್ಕಾರಿ ಗೌರವದೊಂದಿಗೆ ನಡೆಯಲಿದೆ ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಹುಬ್ಬಳ್ಳಿ ಧಾರವಾಡ ಮಹಾನಗರ ಅಭಿವೃದ್ಧಿ ಪ್ರಾಧಿಕಾರಕ್ಕೆ ಶಾಕೀರ ಸನದಿ ಮುಂದುವರಿಕೆ

ಹುಬ್ಬಳ್ಳಿ ಧಾರವಾಡ ಮಹಾನಗರ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಹಾಲಿ ಅಧ್ಯಕ್ಷ ಶಾಕೀರ ಸನದಿಯವರನ್ನು ಮುಂದುವರೆಸಿ ನಗರಾಭಿವೃದ್ಧಿ ಇಲಾಖೆ ಆದೇಶ ಹೊರಡಿಸಿದೆ. ಹುಡಾ ಜೊತೆ ಗದಗ, ಹಾವೇರಿ, ಬೆಳಗಾವಿ

Live Cricket

error: Content is protected !!