Download Our App

Follow us

Home » ರಾಜಕೀಯ » ನಾಯಕತ್ವ ಬದಲಾವಣೆ ರಾಹುಲ್ ಗಾಂಧಿ ತೀರ್ಮಾನಿಸಬೇಕು / ಸಿದ್ದರಾಮಯ್ಯ

ನಾಯಕತ್ವ ಬದಲಾವಣೆ ರಾಹುಲ್ ಗಾಂಧಿ ತೀರ್ಮಾನಿಸಬೇಕು / ಸಿದ್ದರಾಮಯ್ಯ

ಪಕ್ಷಕ್ಕಿಂತ ಯಾರು ದೊಡ್ಡವರಲ್ಲ ಎಂಬ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯನವರು, ಅವರ ಹೇಳಿಕೆಗೆ ನನ್ನ‌ ಪೂರ್ಣ ಸಹಮತವಿದೆ ಎಂದಿದ್ದಾರೆ.

ಯಾರು ಪಕ್ಷಕ್ಕಿಂತ ದೊಡ್ಡವರಾಗಲು ಸಾಧ್ಯವೇ ಇಲ್ಲ ಎಂದಿರುವ ಸಿದ್ದರಾಮಯ್ಯನವರು, ನಾಯಕತ್ವ ಬದಲಾವಣೆ ವಿಚಾರವನ್ನು ರಾಹುಲ್ ಗಾಂಧಿಯವರು ತೀರ್ಮಾನಿಸಬೇಕು ಎಂದಿದ್ದಾರೆ.

ಅವರು ಏನು ತೀರ್ಮಾನಿಸುತ್ತಾರೋ ಅದಕ್ಕೆ ನಾವು ಬದ್ಧ. ನಾನು ಈ ಬಗ್ಗೆ ಪಕ್ಷದ ವರಿಷ್ಠರ ಬಳಿ ಮಾತನಾಡಿದ್ದು, ನಾವು ಈ ಬಗ್ಗೆ ತೀರ್ಮಾನಿಸುತ್ತೇವೆ ಎಂದು ಹೇಳಿದ್ದಾರೆ.

ಮಾಧ್ಯಮದವರೇ ನಾಯಕತ್ವ ಬದಲಾವಣೆಯ ಬಗ್ಗೆ ಹೆಚ್ಚಾಗಿ ಚರ್ಚಿಸುತ್ತಿದ್ದಾರೆ. ಇಷ್ಟೊಂದು ಪ್ರಶ್ನೆ ಕೇಳಬೇಕಾದ ಅಗತ್ಯ ಏನಿದೆ? ವಿಧಾನಸಭೆಯಲ್ಲಿ ಈ ಬಗ್ಗೆ ಹೇಳಿದ ಮೇಲೂ ಪುನಃ ಚರ್ಚೆ ಮಾಡುವ ಅಗತ್ಯವೇ ಇಲ್ಲ ಎಂದು ಸಿದ್ದರಾಮಯ್ಯನವರು ಹೇಳಿಕೆ ನೀಡಿದ್ದಾರೆ.

ಕೆ.ಎನ್.ರಾಜಣ್ಣ ಅವರನ್ನು ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಮಾಡಿದ್ದು ಎಸ್.ಎಂ.ಕೃಷ್ಣನವರ ಸರ್ಕಾರ. ಅಧಿಕಾರದಲ್ಲಿದ್ದಾಗ ನಾನು ಮಾಡಿದೆ, ಅವರು ಮಾಡಿದರು ಎನ್ನುವುದು ಮುಖ್ಯವಲ್ಲ. ಆದರ ಪ್ರಶ್ನೆಯೇ ಇಲ್ಲ. ಎಸ್.ಎಂ.ಕೃಷ್ಣ ಅವರು ಆಗ ಮುಖ್ಯಮಂತ್ರಿಗಳಿದ್ದರು, ಅವರ ಸರ್ಕಾರ ಮಾಡಿತ್ತು ಎಂದು ಹೇಳಿದ್ದಾರೆ.

 

Karnataka Files
Author: Karnataka Files

Leave a Comment

RELATED LATEST NEWS

Top Headlines

ಧಾರವಾಡ : ಕ್ಷೇತ್ರದ ಅಭಿವೃದ್ಧಿ ಕಡೆಗೆ ಗಮನ ಹರಿಸಿದ ಶಾಸಕ ವಿನಯ ಕುಲಕರ್ಣಿ

ಧಾರವಾಡ ಗ್ರಾಮೀಣ ಶಾಸಕ ವಿನಯ ಕುಲಕರ್ಣಿ ಅವರು ಜಾಮೀನಿನ ಮೇಲೆ ಬಂದ ನಂತರ ಕ್ಷೇತ್ರದ ಅಭಿವೃದ್ಧಿ ಕಡೆಗೆ ಗಮನ ಹರಿಸಿದ್ದಾರೆ. ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿ

Live Cricket

error: Content is protected !!