ಕೆಲಸದಲ್ಲಿ ನಿರತರಾದ ಮಹಿಳೆಯರಿಗೆ ಮುಟ್ಟಿನ ರಜೆ ನೀಡಿ ಐತಿಹಾಸಿಕ ನಿರ್ಧಾರ ತೆಗೆದುಕೊಂಡಿರುವ ಕಾರ್ಮಿಕ ಸಚಿವ ಸಂತೋಷ ಲಾಡ್ ಇದೀಗ ಮತ್ತೊಂದು ಕ್ರಾಂತಿಕಾರಕ ನಿರ್ಧಾರ ಕೈಗೊಳ್ಳಲು ನಿರ್ಧರಿಸಿದ್ದಾರೆ.
ಮುಂಬರುವ ಬಜೆಟ್‌ನಲ್ಲಿ ‘ವಿಧವೆಯರು ಮತ್ತು ನಿರ್ಗತಿಕ ಮಹಿಳಾ ಕಲ್ಯಾಣ ಮಂಡಳಿ’ ರಚಿಸಲು ಪೂರ್ವ ಸಿದ್ಧತೆ ನಡೆಸಿದ್ದಾರೆ.
ಕಾಂಗ್ರೇಸ್ ಮುಖಂಡೆ ಕವಿತಾ ರೆಡ್ಡಿ ಎಂಬುವವರು, ವಿಧವೆಯರು ಮತ್ತು ನಿರ್ಗತಿಕ ಮಹಿಳಾ ಕಲ್ಯಾಣ ಮಂಡಳಿ ರಚಿಸುವಂತೆ ಸಚಿವ ಸಂತೋಷ ಲಾಡ್ ಅವರಿಗೆ ಮನವಿ ಪತ್ರ ನೀಡಿ, ಮುಖ್ಯಮಂತ್ರಿಗಳಿಗೆ ಗಮನಕ್ಕೆ ತರುವಂತೆ ಮನವಿ ಸಲ್ಲಿಸಿದ್ದಾರೆ.
ಕರ್ನಾಟಕದಲ್ಲಿ ಒಂದು ಅಂದಾಜಿನ ಪ್ರಕಾರ, ಸುಮಾರು 35 ಲಕ್ಷ ವಿಧವೆಯರು ಮತ್ತು ನಿರ್ಗತಿಕ ಮಹಿಳೆಯರಿದ್ದು, ಅವರ ಕಲ್ಯಾಣಕ್ಕಾಗಿ6 ಶಿಕ್ಷಣ, ಆರೋಗ್ಯ ರಕ್ಷಣೆ, ವಸತಿ ಸೇರಿದಂತೆ ಜೀವನೋಪಾಯಕ್ಕಾಗಿ ಸರ್ಕಾರವು ನೆರವು ನೀಡಬೇಕೆಂಬ ನಿಟ್ಟಿನಲ್ಲಿ ಸಂತೋಷ ಲಾಡ್ ಮುಂದಾಗಿದ್ದಾರೆ.
Author: Karnataka Files
Post Views: 1,052





