ಬೆಂಗಳೂರಿನಿಂದ ಗೋಕರ್ಣಕ್ಕೆ ಹೊರಟಿದ್ದ ಸಿಬರ್ಡ ಸ್ಲೀಪರ್ ಬಸ್ಸು ಕಂಟೇನರ್ ಲಾರಿಗೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಬಸ್ಸಿನಲ್ಲಿದ್ದ 17 ಜನ ಪ್ರಯಾಣಿಕರು ಸಾವನ್ನಪ್ಪಿದ್ದಾರೆ.

ಕಂಟೆನರ್ ಗೆ ಡಿಕ್ಕಿ ಹೊಡೆಯುತ್ತಿದ್ದಂತೆ ಬಸ್ಸಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದೆ.

ಬಸ್ ನಿರ್ವಾಹಕನ ಪ್ರಕಾರ, ಟ್ರಕ್ ನಿಯಂತ್ರಣ ತಪ್ಪಿ ಬಸ್‌ಗೆ ಡಿಕ್ಕಿ ಹೊಡೆದಿದೆ, ಅದರ ಡೀಸೆಲ್ ಟ್ಯಾಂಕ್ ಒಡೆದು, ಬಸ್ಸಿಗೆ ಬೆಂಕಿ ಹೊತ್ತಿಕೊಂಡಿತು ಎಂದು ಹೇಳಿದ್ದಾನೆ.

ಅಪಘಾತದ ಸಮಯದಲ್ಲಿ ಬಸ್ಸಿನಲ್ಲಿ 32 ಪ್ರಯಾಣಿಕರಿದ್ದರು. ಗಾಯಾಳುಗಳನ್ನು ಹಿರಿಯೂರು ಮತ್ತು ಶಿರಾ ಸರ್ಕಾರಿ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.
ಮಿಲನ್, ಕವಿತಾ ಮತ್ತು ಸಂಧ್ಯಾ ಎಂಬುವವರನ್ನು ಹಿರಿಯೂರು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಈ ಮೂವರು, ಬಸ್ಸಿನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ, ಕಿಟಕಿ ಇಂದ ಜಿಗಿದು ಪ್ರಾಣ ಉಳಿಸಿಕೊಂಡಿದ್ದಾರೆ.
ಸಾವಿನ ಸಂಖ್ಯೆ ಇನ್ನು ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಸ್ಥಳಕ್ಕೆ ಹಿರಿಯ ಅಧಿಕಾರಿಗಳು ಭೇಟಿ ನೀಡಿದ್ದು, ಪ್ರಧಾನಿ ನರೇಂದ್ರ ಮೋದಿ, ಘಟನೆಯಲ್ಲಿ ಮೃತಪಟ್ಟವರಿಗೆ ಕಂಬನಿ ಮಿಡಿದು, ಪರಿಹಾರ ಘೋಷಣೆ ಮಾಡಿದ್ದಾರೆ.





