Download Our App

Follow us

Home » ಕಾನೂನು » ಇನಾಂ ವೀರಾಪುರದ ಮರ್ಯಾದಾಗೇಡು ಹತ್ಯೆ ಪ್ರಕರಣ : ತ್ವರಿತಗತಿ ನ್ಯಾಯಾಲಯ ರಚನೆ

ಇನಾಂ ವೀರಾಪುರದ ಮರ್ಯಾದಾಗೇಡು ಹತ್ಯೆ ಪ್ರಕರಣ : ತ್ವರಿತಗತಿ ನ್ಯಾಯಾಲಯ ರಚನೆ

ಹುಬ್ಬಳ್ಳಿ ತಾಲ್ಲೂಕಿನ ಇನಾಂ ವೀರಾಪುರದ ಮಾನ್ಯ ಎಂಬ ಯುವತಿಯ ಮರ್ಯಾದಾಗೇಡು ಹತ್ಯೆಗೆ ಸಂಬಂಧಿಸಿದಂತೆ ಪ್ರಕರಣದ ತ್ವರಿತ ವಿಚಾರಣೆ ನಡೆದು, ಸಂತ್ರಸ್ತರಿಗೆ ನ್ಯಾಯ ದೊರಕಿಸಿಕೊಡುವುದು ನಮ್ಮ ಪ್ರಮುಖ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ತ್ವರಿತಗತಿ ನ್ಯಾಯಾಲಯ ರಚನೆಗೆ ಸರ್ಕಾರ ಕ್ರಮ ಕೈಗೊಳ್ಳಲಿದೆಯೆಂದು ಅವರು ತಿಳಿಸಿದ್ದಾರೆ.

ಇಲ್ಲಿ ದಲಿತರ ಮೇಲಿನ ದೌರ್ಜನ್ಯ ಹಾಗೂ ಕೊಲೆ ಪ್ರಕರಣ ದಾಖಲಾಗಿದೆ. ಇದು ಅಟ್ರಾಸಿಟಿ ಪ್ರಕರಣವಾಗಿರುವುದರಿಂದ 60 ದಿನಗಳ ಒಳಗಾಗಿ ದೋಷರೋಪ ಪಟ್ಟಿ ಸಲ್ಲಿಸಬೇಕಾಗಿದೆ. 

ಹೀಗಾಗಿ ಖಾಸಗಿ ಪ್ರಾಸಿಕ್ಯೂಟರ್‌ರನ್ನು ನೇಮಕ ಮಾಡಿಕೊಳ್ಳಲು ಕ್ರಮ ವಹಿಸಲಾಗಿದೆ ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ.

ಹೆಣ್ಣುಮಗಳೊಬ್ಬಳ ನಿಲುವಿಗೆ ವಿರುದ್ಧವಾಗಿ ಮದುವೆಗೆ ಬಲವಂತಪಡಿಸುವುದು ಅಥವಾ ಮದುವೆ ನಿರಾಕರಿಸುವುದು, ಜಾತಿಯಾಧಾರಿತ ಹಿಂಸೆ -ಹಲ್ಲೆ, ಮರ್ಯಾದಾಗೇಡು ಹತ್ಯೆಯಂತಹ ಘಟನೆಗಳು ಇಡೀ ಮಾನವ ಸಮಾಜ ತಲೆತಗ್ಗಿಸುವಂತಹ ಹೀನ ಕೃತ್ಯಗಳಾಗಿವೆ. 

ಯಾವುದೇ ಕಾರಣಕ್ಕೂ ನಮ್ಮ ಸರ್ಕಾರ ಇದನ್ನು ಸಹಿಸುವುದಿಲ್ಲ. ಮುಂದೆ ಇಂತಹ ಘಟನೆಗಳಿಗೆ ಕಡಿವಾಣ ಹಾಕುವ ಹಾಗೂ ಜನರಲ್ಲಿ ಕಾನೂನಿನ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ವಿಶೇಷ ಕಾನೂನು ರಚನೆ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ. ಈ ಬಗ್ಗೆ ವಿಧಾನ ಮಂಡಲದ ಮುಂದಿನ ಅಧಿವೇಶನದಲ್ಲಿ ಚರ್ಚಿಸಿ, ಸೂಕ್ತ ನಿರ್ಣಯ ತೆಗೆದುಕೊಳ್ಳುವದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. 

 

 

Karnataka Files
Author: Karnataka Files

Leave a Comment

RELATED LATEST NEWS

error: Content is protected !!