ಬಳ್ಳಾರಿಯಲ್ಲಿ ಬ್ಯಾನರ್ ಗಲಾಟೆ ಮರೆಯುವ ಮುನ್ನವೇ ಜನಾರ್ದನ್ ರೆಡ್ಡಿ ಹಾಗೂ ಮಾಜಿ ಸಚಿವ ಬಿ ಶ್ರೀರಾಮುಲು ಮಾಲೀಕತ್ವದ ಮಾಡೆಲ್ ಹೌಸ್ ಗೆ ಶುಕ್ರವಾರ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ ಎನ್ನಲಾಗಿದೆ.
ಬೆಂಕಿಯ ಕೆನ್ನಾಲಿಗೆಗೆ ಇಡೀ ಕಟ್ಟಡ ಧಗ ಧಗ ಹೊತ್ತಿ ಉರಿದಿದೆ.
ಬಳ್ಳಾರಿಯ ಕಂಟೋನ್ಮೆಂಟ್ ಬಳಿ ಇರುವ ಜನಾರ್ದನ್ ರೆಡ್ಡಿ ಮಾಲೀಕತ್ವದ ಜಿ ಸ್ಕೈರ್ ಲೇಔಟ್ನಲ್ಲಿರುವ ಮಾಡೆಲ್ ಹೌಸ್ಗೆ ಬೆಂಕಿ ಬಿದ್ದಿದೆ.
ಘಟನೆಯ ಕುರಿತು ಜನಾರ್ಧನ ರೆಡ್ಡಿ ಸಹೋದರ, ಮಾಜಿ ಶಾಸಕ ಸೋಮಶೇಖರ ರೆಡ್ಡಿ, ಶಾಸಕ ನಾರಾ ಭರತ ರೆಡ್ಡಿ ಮೇಲೆ ಗಂಭೀರ ಆರೋಪ ಮಾಡಿದ್ದಾರೆ.
ಶಾಸಕ ಭರತ ರೆಡ್ಡಿಯ ಬೆಂಬಲಿಗರು ಪೆಟ್ರೋಲ್ ಬಾಂಬ ಹಾಕಿ ಬೆಂಕಿ ಹಚ್ಚಿದ್ದಾರೆ ಎಂದು ಆರೋಪಿಸಿದ್ದಾರೆ.
ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸುತ್ತಿದ್ದು, ಪೊಲೀಸರು ಸಹ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Author: Karnataka Files
Post Views: 404





