Download Our App

Follow us

Home » ಕಾನೂನು » ಇನ್ಮೇಲೆ ಪೊಲೀಸರಿಗೆ ಹುಟ್ಟುಹಬ್ಬ ಮತ್ತು ವಿವಾಹ ವಾರ್ಷಿಕೋತ್ಸವಗಳಿಗೆ ರಜೆ

ಇನ್ಮೇಲೆ ಪೊಲೀಸರಿಗೆ ಹುಟ್ಟುಹಬ್ಬ ಮತ್ತು ವಿವಾಹ ವಾರ್ಷಿಕೋತ್ಸವಗಳಿಗೆ ರಜೆ

ಹುಟ್ಟುಹಬ್ಬ ಮತ್ತು ವಿವಾಹ ವಾರ್ಷಿಕೋತ್ಸವಗಳಿಗೆ ಸಾಂದರ್ಭಿಕ ರಜೆ ಮಂಜೂರು ಮಾಡುವ ನಿಟ್ಟಿನಲ್ಲಿ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಎಮ್ ಎ ಸಲೀಮ್ ಅವರು ಕ್ರಾಂತಿಕಾರಕ ನಿರ್ಧಾರ ಪ್ರಕಟಿಸಿದ್ದಾರೆ.

ಸಾರ್ವಜನಿಕರ ಸುರಕ್ಷತೆ ಹಾಗೂ ಕಾನೂನು ಜಾರಿಯನ್ನು ಖಚಿತಪಡಿಸಿಕೊಳ್ಳಲು ಕಠಿಣ ಪರಿಸ್ಥಿತಿಗಳಲ್ಲಿ ಕೆಲಸ ನಿರ್ವಹಿಸುವ ಪೊಲೀಸ್ ಸಿಬ್ಬಂದಿಗಳಿಗೆ ಹುಟ್ಟುಹಬ್ಬ ಮತ್ತು ವಿವಾಹ ವಾರ್ಷಿಕೋತ್ಸವಗಳಂತಹ ವೈಯಕ್ತಿಕ ಕಾರ್ಯಕ್ರಮಗಳನ್ನು ಆಚರಿಸುವುದು ಬಹಳ ಮಹತ್ವದ್ದಾಗಿದೆ ಎಂದು ಅವರು ಹೇಳಿದ್ದಾರೆ.

ಈ ವಿಶೇಷ ದಿನಗಳಲ್ಲಿ ರಜೆ ಪಡೆಯುವುದರಿಂದ ಅಧಿಕಾರಿಗಳು ಮತ್ತು ಸಿಬ್ಬಂದಿ ಭಾವನಾತ್ಮಕವಾಗಿ ಮನಶ್ವೇತನಗೊಳ್ಳಲು, ಕುಟುಂಬದೊಂದಿಗೆ ಗುಣಮಟ್ಟದ ಸಮಯವನ್ನು ಕಳೆಯಲು ಹಾಗೂ ಕರ್ತವ್ಯ ಮತ್ತು ವೈಯಕ್ತಿಕ ಜೀವನದ ನಡುವೆ ಸಮತೋಲನವನ್ನು ಕಾಪಾಡಿಕೊಳ್ಳಲು ಸಹಾಯವಾಗುತ್ತದೆ. 

ಇದರಿಂದ ಅವರ ಮನೋಬಲ ವೃದ್ಧಿಯಾಗುತ್ತದೆ, ಒತ್ತಡ ಕಡಿಮೆಯಾಗುತ್ತದೆ ಮತ್ತು ಒಟ್ಟಾರೆ ಕೆಲಸದ ತೃಪ್ತಿ ಹೆಚ್ಚಿಸುತ್ತದೆ ಎಂದು ಅವರು ಆದೇಶದಲ್ಲಿ ತಿಳಿಸಿದ್ದಾರೆ.

ಈ ಮಾನವೀಯ ಕಾರ್ಯವು ಅವರ ತ್ಯಾಗಗಳನ್ನು ಗುರುತಿಸುವುದರ ಜೊತೆಗೆ ನಿಷ್ಠೆಯನ್ನು ಬೆಳೆಸುತ್ತದೆ ಮತ್ತು ಪೊಲೀಸ್ ಪಡೆಯ ಬದ್ಧತೆಯನ್ನು ಬಲಪಡಿಸಿ, ಸೇವೆಯಲ್ಲಿ ಉತ್ತಮ ಶಿಸ್ತು ಮತ್ತು ಕಾರ್ಯಕ್ಷಮತೆಗೆ ಸಹಕಾರಿಯಾಗುತ್ತದೆ ಎಂದಿದ್ದಾರೆ.

ಈ ಹಿನ್ನೆಲೆಯಲ್ಲಿ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳು ತಮ್ಮ ಹುಟ್ಟುಹಬ್ಬ ಮತ್ತು ವಿವಾಹ ವಾರ್ಷಿಕೋತ್ಸವದ ಸಂದರ್ಭದಲ್ಲಿ ರಜೆ ಕೋರಿದಲ್ಲಿ, ತಪ್ಪದೆ ರಜೆ ಮಂಜೂರು ಮಾಡಲು ಎಲ್ಲಾ ಘಟಕಾಧಿಕಾರಿಗಳಿಗೆ ಅವರು ನಿರ್ದೇಶನ ನೀಡಿದ್ದಾರೆ. 

 

 

Karnataka Files
Author: Karnataka Files

Leave a Comment

RELATED LATEST NEWS

error: Content is protected !!