ಧಾರವಾಡ ಗ್ರಾಮೀಣ ಶಾಸಕ ವಿನಯ ಕುಲಕರ್ಣಿ ಅವರು ಜಾಮೀನಿನ ಮೇಲೆ ಬಂದ ನಂತರ ಕ್ಷೇತ್ರದ ಅಭಿವೃದ್ಧಿ ಕಡೆಗೆ ಗಮನ ಹರಿಸಿದ್ದಾರೆ.
ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿ ಮಾಡಿದ ಅವರು, ಕ್ಷೇತ್ರದ ಸಮಸ್ಯೆಗಳನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದರು.
ಬಜೆಟ್ ಅಧಿವೇಶನ ಮುಗಿದ ಬಳಿಕ ವಿನಯ ಕುಲಕರ್ಣಿಯವರು ನ್ಯಾಯಾಲಯದ ಅನುಮತಿ ಪಡೆದು ಧಾರವಾಡದಲ್ಲಿ ನಡೆಯುವ ಕೆಡಿಪಿ ಸಭೆಯಲ್ಲಿ ಭಾಗವಹಿಸುವ ಸಾಧ್ಯತೆ ಇದೆ ಎನ್ನಲಾಗಿದೆ.
ಧಾರವಾಡ ಜಿಲ್ಲೆಯಿಂದ ಹೊರಗೆ ಇದ್ದರು ಸಹ ಅವರು ತಮ್ಮ ಅನುಪಸ್ಥಿತಿಯಲ್ಲಿಯೂ ಕ್ಷೇತ್ರದ ಕೆಲಸಗಳನ್ನು ಮಾಡಿಸುತ್ತಾ ಬಂದಿದ್ದನ್ನು ಇಲ್ಲಿ ಸ್ಮರಿಸಬಹುದು.
Author: Karnataka Files
Post Views: 1,479





