ಸ್ನೇಹಿತನ ಮದುವೆಗೆ ಬೆಂಗಳೂರಿನಿಂದ ಬಳ್ಳಾರಿಗೆ ಹೊರಟಿದ್ದ ಮೂವರು ಪಿಎಸ್ಐ ಗಳು ಚಳ್ಳಕೇರಿಯ ಹೆಗ್ಗೆರಿ ಬಳಿ ನಡೆದ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.

ಟ್ರಕ್ ಮತ್ತು ಕಾರ್ ಅಪಘಾತದಲ್ಲಿ ಮೂವರು ರಿಸರ್ವ್ PSI ಗಳು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಮೃತ ಮೂವರು ರಿಸರ್ವ್ ಸಬ್ ಇನ್‌ಸ್ಪೆಕ್ಟರ್ ಗಳಾಗಿದ್ದು, ಮೃತರನ್ನು ಮಂಜುನಾಥ್, ಅಂಬರೀಷ್ ಮತ್ತು ಸಚಿನ್ ಎಂದು ಗುರುತಿಸಲಾಗಿದೆ.
ಐವರು ಪಿ ಎಸ್ ಐ ಗಳು ಒಂದೇ ಕಾರ್‌ನಲ್ಲಿ ಬೆಂಗಳೂರಿನಿಂದ ಬಳ್ಳಾರಿಗೆ ತೆರಳುತ್ತಿದ್ದರು.

ಕಾರಿನಲ್ಲಿದ್ದ RSI ಮಹಂತೇಶ್, PSI ಈಶ್ವರ್ ಗಂಭೀರವಾಗಿ ಗಾಯಗೊಂಡಿದ್ದು, ಚಿತ್ರದುರ್ಗ ಬಸವೇಶ್ವರ ಆಸ್ಪತ್ರೆಗೆ ದಾಖಲಿಸಲಾಗಿದೆ.
ಲಾರಿಗೆ ಕಾರ್ ಡಿಕ್ಕಿ ಹೊಡೆದಿದ್ದು, ಅಪಘಾತಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ.
ಐಮಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದೆ.
Author: Karnataka Files
Post Views: 1,262




