ಕರ್ನಾಟಕದಿಂದ ರಾಜ್ಯಸಭೆಗೆ ನಡೆಯುವ ಚುನಾವಣೆಗೆ ಕಾಂಗ್ರೇಸ್ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟ ಮಾಡಿದೆ.
ಕರ್ನಾಟಕದಿಂದ ಅಖಿಲ ಭಾರತ ಕಾಂಗ್ರೇಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪವನ ಖೇರಾ ಹಾಗೂ ಮನ್ಸೂರ್ ಅಲಿ ಖಾನ್ ಅವರಿಗೆ ಟಿಕೇಟ್ ಘೋಷಣೆ ಮಾಡಲಾಗಿದೆ.

ಮನ್ಸೂರ್ ಅಲಿ ಖಾನ್ 2024 ರ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಸೆಂಟ್ರಲ್ ಕ್ಷೇತ್ರದಿಂದ ಸ್ಪರ್ಧೆ ಮಾಡಿದ್ದರು.
ಮನ್ಸೂರ್ ಅಲಿ ಖಾನ್, ತೆಲಂಗಾಣದಲ್ಲಿ ಕಾಂಗ್ರೇಸ್ ಪರವಾಗಿ ಕೆಲಸ ಮಾಡಿ, ಹೈಕಮಾಂಡ್ ಗಮನ ಸೆಳೆದಿದ್ದರು.
ಕರ್ನಾಟಕದಿಂದ ಮುಸ್ಲಿಮ್ ನಾಯಕನೊಬ್ಬನಿಗೆ ರಾಜ್ಯಸಭೆ ಪ್ರವೇಶಿಸಲು ಅವಕಾಶ ಸಿಕ್ಕಂತಾಗಿದೆ.
Author: Karnataka Files
Post Views: 230




