ಜೀವಾವಧಿ ಶಿಕ್ಷೆ ಎದುರಿಸುತ್ತಿದ್ದ ಮಾಜಿ ಸಚಿವ ವಿನಯ ಕುಲಕರ್ಣಿಯವರಿಗೆ ಬೆಂಗಳೂರಿನ ವಿಭಾಗೀಯ ಪೀಠ ಬಿಗ್ ರಿಲೀಫ್ ನೀಡಿದೆ.
ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿನಯ ಕುಲಕರ್ಣಿಯವರು ಸೆಷೆನ್ಸ್ ನ್ಯಾಯಾಲಯ ನೀಡಿದ ಜೀವಾವಧಿ ತೀರ್ಪನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಲೇರಿದ್ದರು.
ವಿನಯ ಕುಲಕರ್ಣಿಯವರ ಪರ ದೇಶದ ಹೆಸರಾಂತ ವಕೀಲ ಸಿ ವಿ ನಾಗೇಶ ಅವರು ಸಮರ್ಥವಾಗಿ ವಾದ ಮಂಡನೆ ಮಾಡಿದ್ದರು.
ಸಿ ಬಿ ಐ ನಡೆಸಿದ್ದ ತನಿಖೆಯ ಪರಿಯನ್ನು ಎಳೆಎಳೆಯಾಗಿ ಬಿಚ್ಚಿಟ್ಟಿದ್ದ ಸಿ ವಿ ನಾಗೇಶ ಅವರು ಪ್ರಕರಣ ಎಲ್ಲಿ ಹಾದಿ ತಪ್ಪಿದೆ ಅನ್ನೋದನ್ನು ಹೈಕೋರ್ಟ ಗಮನಕ್ಕೆ ತಂದಿದ್ದರು.
ಪ್ರಕರಣದ ವಿಚಾರಣೆ ನಡೆಸಿದ್ದ ಹೈಕೋರ್ಟ ವಿಭಾಗೀಯ ಪೀಠದ ನ್ಯಾಯಮೂರ್ತಿಗಳಾದ ಮೊಹಮ್ಮದ್ ನವಾಜ್ ಹಾಗೂ ನ್ಯಾಯಮೂರ್ತಿ ಜಿ. ಬಸವರಾಜು ಅವರನ್ನೊಳಗೊಂಡ ವಿಭಾಗೀಯ ಪೀಠ ಇಂದು ಜೀವಾವಧಿ ಶಿಕ್ಷೆಗೆ ತಡೆಯಾಜ್ಞೆ ನೀಡಿ, ಜಾಮೀನು ಮಂಜೂರು ಮಾಡಿದೆ. ಅಲ್ಲದೇ ಧಾರವಾಡ ಪ್ರವೇಶಕ್ಕೆ ವಿಧಿಸಲಾಗಿದ್ದ ನಿರ್ಬಂಧವನ್ನು ರದ್ದು ಮಾಡಿದೆ.
ಪರಪ್ಪನ ಅಗ್ರಹಾರದಲ್ಲಿರುವ ವಿನಯ ಕುಲಕರ್ಣಿಯವರು ಇಂದು ಸಂಜೆ ವೇಳೆಗೆ ಜೈಲಿನಿಂದ ಹೊರ ಬರಲಿದ್ದಾರೆ.





