ಮಂಗಳೂರಿನ ಕೆ.ಎಸ್. ರಾವ್ ರಸ್ತೆಯಲ್ಲಿರುವ ಕೆಎಫ್ಸಿ ಔಟ್ಲೆಟ್ ಮೇಲೆ ಆಹಾರ ಸುರಕ್ಷತಾ ಅಧಿಕಾರಿಗಳು ಹಠಾತ್ ದಾಳಿ ನಡೆಸಿದ್ದಾರೆ.
ಆನ್ಲೈನ್ನಲ್ಲಿ ಆರ್ಡರ್ ಮಾಡಿದ ಬಳಿಕ, KFC ಇಂದ ದುರ್ವಾಸನೆ ಬೀರುವ ಕೋಳಿ ಮಾಂಸವನ್ನು ಪೂರೈಸಲಾಗಿದೆ ಎಂದು ಗ್ರಾಹಕರು ದೂರಿದ್ದರು.
ಅಡುಗೆಮನೆ, ಅಂಗಡಿ ಕೊಠಡಿ ಮತ್ತು ಕೋಲ್ಡ್ ಸ್ಟೋರೇಜ್ ಪರಿಶೀಲನೆಯ ಸಮಯದಲ್ಲಿ, ಅಧಿಕಾರಿಗಳು ಗೋ-ಡೌನ್ ಅನ್ನು ಸೀಲ್ ಮಾಡಿದ್ದಾರೆ.
ಆಹಾರ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಪ್ರಯೋಗಾಲಯದ ವರದಿಯ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಆಹಾರ ಸುರಕ್ಷತಾ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
Author: Karnataka Files
Views: 800





