ಹುಬ್ಬಳ್ಳಿ ಧಾರವಾಡದಲ್ಲಿ ಮುಂದಿನ ವಾರ ಈ ಮಿಲಾದ್ ಹಬ್ಬವನ್ನು ಆಚರಿಸಲಾಗುತ್ತಿದೆ . ಈದ ಮಿಲಾದಂದು ಅವಳಿನಗರದಲ್ಲಿ ಬೃಹತ್ ಮೆರವಣಿಗೆ ನಡೆಯಲಿದೆ.
ಈ ಸಂದರ್ಭದಲ್ಲಿ ಡಿ ಜೆ ಬಳಕೆಗೆ ಅನುಮತಿ ನೀಡಬಾರದು ಎಂದು ಹುಬ್ಬಳ್ಳಿ ಅಂಜುಮನ್ ಸಂಸ್ಥೆಯವರು ಪೊಲೀಸ್ ಆಯುಕ್ತ ಎನ್ ಶಶಿಕುಮಾರ ಅವರಿಗೆ ಮನವಿ ಮಾಡಿದ್ದಾರೆ.
ಪೊಲೀಸ್ ಆಯುಕ್ತರಿಗೆ ಮನವಿ ಮಾಡಿರುವ ಅಂಜುಮನ್ ಇಸ್ಲಾಂ ಸಂಸ್ಥೆಯ ಅಧ್ಯಕ್ಷ ಎ ಎಂ ಹಿಂಡಸಗೇರಿ ಅವರು , ಈದ್ ಮಿಲಾದ್ ಹಬ್ಬದ ಮೆರವಣಿಗೆಯಲ್ಲಿ ಡಿ ಜೆ ಹಚ್ಚಬಾರದು ಎಂದು ಎಲ್ಲರಿಗೂ ಮನವಿ ಮಾಡಿದ್ದೇವೆ .
ಪೊಲೀಸ್ ಇಲಾಖೆಯಿಂದ ಡಿ ಜೆ ಹಚ್ಚಲು ಅನುಮತಿ ನೀಡಬಾರದು ಎಂದು ಹೇಳಿದರು .
ಡಿ ಜೆ ಬಳಕೆಯಿಂದ ಸಾರ್ವಜನಿಕರು ಹಾಗೂ ರೋಗಿಗಳಿಗೆ ತೊಂದರೆಯಾಗುತ್ತಿದ್ದು, ಹಬ್ಬವನ್ನು ಶಾಂತಿಯುತವಾಗಿ ಆಚರಣೆ ಮಾಡಲು ಸಹಕಾರ ನೀಡಬೇಕೆಂದು ಮನವಿ ಮಾಡಿದ್ದಾರೆ.
Author: Karnataka Files
Post Views: 454





