ಗದಗ ಜಿಲ್ಲೆಯ ಕಾರ್ಯಕ್ರಮದಲ್ಲಿ ಭಾಗವಹಿಸಲು ಹುಬ್ಬಳ್ಳಿಗೆ ಬಂದಿದ್ದ ಮುಖ್ಯಮಂತ್ರಿ ಡಿ ಕೆ ಶಿವಕುಮಾರರನ್ನು, ಧಾರವಾಡ ಗ್ರಾಮೀಣ ಶಾಸಕ ವಿನಯ ಕುಲಕರ್ಣಿ ಸ್ವಾಗತಿಸಿದರು.
ಧಾರವಾಡ ಜಿಲ್ಲೆಯಲ್ಲಿ ಕೃಷಿ, ಕಹಿ ಅನುಭವ ನೀಡಿದೆ. ಮುಂಗಾರು ಮಳೆ ವಾಡಿಕೆಗಿಂತ ಕಡಿಮೆ ಬಿದ್ದಿದ್ದು, ಅನ್ನದಾತ ಸಂಕಷ್ಟದಲ್ಲಿದ್ದಾನೆ.

ನನ್ನೊಬ್ಬನ ಕ್ಷೇತ್ರದಲ್ಲಷ್ಟೆ ಅಲ್ಲ, ಇಡೀ ಧಾರವಾಡ ಜಿಲ್ಲೆಯಲ್ಲಿ ಬರದ ಛಾಯೆ ಆವರಿಸಿದೆ. ಕೂಡಲೇ ಧಾರವಾಡ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಸಾರುವಂತೆ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಉಪಸ್ಥಿತರಿದ್ದರು.
Author: Karnataka Files
Post Views: 752





