Download Our App

Follow us

Home » ರಾಜಕೀಯ » ಧಾರವಾಡ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದ ವಿನಯ ಕುಲಕರ್ಣಿ : ರೋಗಿಗಳ ಆರೋಗ್ಯ ವಿಚಾರಣೆ

ಧಾರವಾಡ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದ ವಿನಯ ಕುಲಕರ್ಣಿ : ರೋಗಿಗಳ ಆರೋಗ್ಯ ವಿಚಾರಣೆ

ಧಾರವಾಡ ಗ್ರಾಮೀಣ ಶಾಸಕ ವಿನಯ ಕುಲಕರ್ಣಿಯವರು ಇಂದು ಧಾರವಾಡ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದರು.

ಆಸ್ಪತ್ರೆಯ ವಿವಿಧ ವಾರ್ಡಗಳಿಗೆ ಭೇಟಿ ನೀಡಿದ ಅವರು, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ, ಸಂಗಪ್ಪಾ ಗಾಬಿಯವರಿಂದ ಮಾಹಿತಿ ಪಡೆದುಕೊಂಡರು.

ಬಡವರ ಸಂಜೀವಿನಿ ಎಂದೇ ಹೆಸರಾದ ಧಾರವಾಡ ಜಿಲ್ಲಾಸ್ಪತ್ರೆಯಲ್ಲಿ ರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡುತ್ತಿರುವ ವೈದ್ಯರನ್ನು ಅಭಿನಂದಿಸಿದರು.

ರೋಗಿಗಳನ್ನು ಮಾತನಾಡಿಸಿ ಅವರ ಆರೋಗ್ಯ ವಿಚಾರಿಸಿದರು. ಜಿಲ್ಲಾಸ್ಪತ್ರೆಯಲ್ಲಿ ನುರಿತ ವೈಧ್ಯರು ಇದ್ದು,  ಉತ್ತಮ ಚಿಕಿತ್ಸೆ ನೀಡುತ್ತಿರುವದನ್ನು ಶ್ಲಾಘಿಸಿದರು.

ಜಿಲ್ಲಾಸ್ಪತ್ರೆಯಲ್ಲಿ ಅತ್ಯಾದುನಿಕ ಚಿಕಿತ್ಸೆ ನೀಡಲಾಗುತ್ತಿದ್ದು, ರೋಗಿಗಳಿಗೆ ಉತ್ತಮ ಚಿಕಿತ್ಸೆ ದೊರಕಿಸಿಕೊಡುವಲ್ಲಿ ಸರ್ಕಾರ ಎಲ್ಲ ರೀತಿಯ ಸಹಾಯ ಮಾಡುತ್ತದೆ ಎಂದರು.

ವಿನಯ, ನಿಜಕ್ಕೂ ವಿನಯವಂತ 

ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸೆಪ್ಟೆಂಬರ್ 5, 2020 ರಂದು ವಿನಯ ಕುಲಕರ್ಣಿಯವರನ್ನು ಸಿಬಿಐ ಬಂಧಿಸಿ,, ಆರೋಗ್ಯ ತಪಾಸಣೆಗೆ ಇದೇ ಆಸ್ಪತ್ರೆಗೆ ಕರೆದುಕೊಂಡು ಬಂದಾಗ, ವಿನಯ ಕುಲಕರ್ಣಿಯವರು, ಆಸ್ಪತ್ರೆಯ ಬಗ್ಗೆ ವೈದ್ಯರ ಹತ್ತಿರ ಮಾಹಿತಿ ಕಲೆ ಹಾಕಿದ್ದರು. ರೋಗಿಗಳಿಗೆ ಉತ್ತಮ ಚಿಕಿತ್ಸೆ ಸಿಗಬೇಕು ಎಂದು ಹೇಳಿದ್ದರು.

ಸದ್ಯ ಅವರು 6 ವರ್ಷದ ಬಳಿಕ ಧಾರವಾಡಕ್ಕೆ ಮರಳಿದ್ದು, ಇಂದು ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.

ಆಸ್ಪತ್ರೆಗೆ ಬೇಕಾಗುವ ಅವಶ್ಯಕ ಸೌಲಭ್ಯಗಳನ್ನು  ಕಲ್ಪಿಸಲು ಬೇಕಾಗುವ ಎಲ್ಲ ವ್ಯವಸ್ಥೆಗಳನ್ನು ಮಾಡಿಕೊಡುವದಾಗಿ ಭರವಸೆ ನೀಡಿದರು.

ಈ ಸಂಧರ್ಭದಲ್ಲಿ ವೈದ್ಯ ಸಂಗಪ್ಪಾ ಹಾಗೂ ಕಾಂಗ್ರೇಸ್ ಮುಖಂಡ ಬಸವರಾಜ ಜಾಧವ ಸೇರಿದಂತೆ ಅನೇಕರು ಉಪಸ್ಥಿತರಿದ್ದರು

Karnataka Files
Author: Karnataka Files

Leave a Comment

RELATED LATEST NEWS

Top Headlines

ನಿಮ್ಮ ಮುಂದಿನ ಪಯಣ ಮತ್ತಷ್ಟು ಯಶಸ್ವಿಯಾಗಲಿ

ಎನ್ ಶಶಿಕುಮಾರ ಹುಬ್ಬಳ್ಳಿಗೆ ಕಮಿಷನರ್ ಆಗಿ ಬಂದಂತ ಸಮಯದಲ್ಲಿ ಅನೇಕ ಸವಾಲುಗಳು ಅವರ ಬೆನ್ನಿಗೇರಿದ್ದವು.  ಅವರ ಬಗ್ಗೆ, ಅವರ ಕೆಲಸದ ಸ್ಟೈಲ್ ಬಗ್ಗೆ, ಅವರು ಅಧಿಕಾರ ಸ್ವೀಕರಿಸುವದಕ್ಕೂ

Live Cricket

error: Content is protected !!