Download Our App

Follow us

Home » ರಾಜಕೀಯ » ನವಲಗುಂದ ಕಾಂಗ್ರೆಸ್‌ನಲ್ಲಿ ಮೂಲ ಕಾಂಗ್ರೇಸ್ಸಿಗರ ಮೂಲೆಗುಂಪು ! ಸಂಚಲನ ಮೂಡಿಸಿದ ವಿಜಯ ಕುಲಕರ್ಣಿ ಹಾಗೂ ವಿನೋದ ಅಸೂಟಿ ಮಾತು

ನವಲಗುಂದ ಕಾಂಗ್ರೆಸ್‌ನಲ್ಲಿ ಮೂಲ ಕಾಂಗ್ರೇಸ್ಸಿಗರ ಮೂಲೆಗುಂಪು ! ಸಂಚಲನ ಮೂಡಿಸಿದ ವಿಜಯ ಕುಲಕರ್ಣಿ ಹಾಗೂ ವಿನೋದ ಅಸೂಟಿ ಮಾತು

ನವಲಗುಂದ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ನಲ್ಲಿ ಮೂಲ ಕಾಂಗ್ರೆಸ್ಸಿಗರು ಮತ್ತು ವಲಸಿಗರ ನಡುವಿನ ಅಸಮಾಧಾನ ಇದೀಗ ಬಹಿರಂಗ ಚರ್ಚೆಗೆ ಗ್ರಾಸವಾಗಿದೆ. ಪಕ್ಷಕ್ಕಾಗಿ ಹಲವು ವರ್ಷಗಳಿಂದ ದುಡಿದ ಮೂಲ ಕಾಂಗ್ರೆಸ್ಸಿಗರನ್ನು ವ್ಯವಸ್ಥಿತವಾಗಿ ಮೂಲೆಗುಂಪು ಮಾಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.

ಪಕ್ಷದ ಸಂಘಟನೆಯಲ್ಲಿ ಮೂಲ ಕಾಂಗ್ರೆಸ್ಸಿಗರನ್ನು ಕಡೆಗಣಿಸಿ, ವಲಸೆ ಬಂದವರಿಗೆ ಹೆಚ್ಚಿನ ಮನ್ನಣೆ ನೀಡಲಾಗುತ್ತಿದೆ ಎಂಬ ಅಸಮಾಧಾನ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಕೆಪಿಸಿಸಿ ಸದಸ್ಯ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡ ವಿಜಯ ಕುಲಕರ್ಣಿ ಅವರು ಮೂಲ ಕಾಂಗ್ರೆಸ್ಸಿಗರನ್ನೇ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ನೇಮಕ ಮಾಡಬೇಕು ಎಂದು ಆಗ್ರಹಿಸಿರುವುದು ರಾಜಕೀಯ ವಲಯದಲ್ಲಿ ಮಹತ್ವ ಪಡೆದುಕೊಂಡಿದೆ.

ವಲಸಿಗರ ವಿರುದ್ಧ ಮೊದಲ ಬಹಿರಂಗ ಧ್ವನಿ

ಹಾಲಿ ಶಾಸಕ ಎನ್.ಎಚ್. ಕೋನರೆಡ್ಡಿ ಅವರು ಜೆಡಿಎಸ್‌ನಿಂದ ಕಾಂಗ್ರೆಸ್‌ಗೆ ಬಂದಿರುವ ಹಿನ್ನೆಲೆಯಲ್ಲಿ, ಕ್ಷೇತ್ರದಲ್ಲಿ ಮೂಲ ಕಾಂಗ್ರೆಸ್ಸಿಗರು ಹಾಗೂ ವಲಸೆ ಬಂದವರ ನಡುವಿನ ವಿಚಾರ ಇದೀಗ ಬಹಿರಂಗವಾಗಿ ಚರ್ಚೆಯಾಗುತ್ತಿದೆ. ಪಕ್ಷದ ಸಂಘಟನೆಯಲ್ಲಿ ಯಾರಿಗೆ ಆದ್ಯತೆ ನೀಡಬೇಕು ಎಂಬ ಪ್ರಶ್ನೆ ಮುನ್ನೆಲೆಗೆ ಬಂದಿದೆ.

 

ಅಹಂಕಾರದ ವರ್ತನೆ ಸರಿಯಲ್ಲ ಎಂದ ವಿನೋದ ಅಸೂಟಿ!

ಇನ್ನೊಂದೆಡೆ, ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳೆಲ್ಲರೂ ಒಗ್ಗಟ್ಟಿನಿಂದ ಶ್ರಮಿಸಿದ್ದರ ಫಲವಾಗಿ ನವಲಗುಂದದಲ್ಲಿ ಪಕ್ಷಕ್ಕೆ ಗೆಲುವು ಸಾಧ್ಯವಾಯಿತು. ಆದರೆ ಗೆಲುವಿನ ನಂತರ ಅಹಂಕಾರದಿಂದ ವರ್ತಿಸುವುದು ಸರಿಯಲ್ಲ ಎಂದು ವಿನೋದ ಅಸೂಟಿ ಹೇಳಿರುವುದು ಮತ್ತಷ್ಟು ಕುತೂಹಲ ಮೂಡಿಸಿದೆ.

 

             ಪಕ್ಷ ಯಾರಪ್ಪನ ಸ್ವತ್ತಲ್ಲ!

 

ಮುಂಬರುವ ಚುನಾವಣೆಯಲ್ಲಿಯೂ ನಾನೇ ಶಾಸಕ ಎಂಬ ರೀತಿಯಲ್ಲಿ ಎನ್.ಎಚ್. ಕೋನರೆಡ್ಡಿ ಅವರು ಹೇಳಿಕೊಂಡು ಬರುತ್ತಿರುವುದಕ್ಕೆ ಪಕ್ಷದೊಳಗಿನ ಕೆಲವು ನಾಯಕರು ಆಕ್ಷೇಪ ವ್ಯಕ್ತಪಡಿಸುತ್ತಿದ್ದಾರೆ ಎನ್ನಲಾಗಿದೆ. ಕಾಂಗ್ರೆಸ್ ಪಕ್ಷ ಯಾರೊಬ್ಬರ ಸ್ವತ್ತಲ್ಲ, ಪಕ್ಷದಲ್ಲಿ ಎಲ್ಲರಿಗೂ ಅವಕಾಶ ಮತ್ತು ಗೌರವ ಇರಬೇಕು ಎಂಬ ಅಭಿಪ್ರಾಯವೂ ವ್ಯಕ್ತವಾಗುತ್ತಿದೆ.

 

ಮುಂದಿನ ರಾಜಕೀಯ ಬೆಳವಣಿಗೆಗೆ ಮುನ್ಸೂಚನೆಯೇ

ನಿನ್ನೆ ನಡೆದ ಸಭೆಯಲ್ಲಿ ವಿಜಯ ಕುಲಕರ್ಣಿ ಹಾಗೂ ವಿನೋದ ಅಸೂಟಿ ಅವರು ವ್ಯಕ್ತಪಡಿಸಿದ ನೇರ ಅಭಿಪ್ರಾಯಗಳು ನವಲಗುಂದ ಕಾಂಗ್ರೆಸ್‌ನ ಆಂತರಿಕ ರಾಜಕೀಯದಲ್ಲಿ ಹೊಸ ಚರ್ಚೆಗೆ ನಾಂದಿ ಹಾಡಿವೆ. ಮೂಲ ಕಾಂಗ್ರೆಸ್ಸಿಗರ ಅಸಮಾಧಾನಕ್ಕೆ ಪಕ್ಷದ ವರಿಷ್ಠರು ಯಾವ ರೀತಿ ಸ್ಪಂದಿಸುತ್ತಾರೆ? ಕ್ಷೇತ್ರದ ಕಾಂಗ್ರೆಸ್ ಸಂಘಟನೆಯಲ್ಲಿ ಬದಲಾವಣೆಯಾಗುತ್ತದೆಯೇ? ಎಂಬ ಪ್ರಶ್ನೆಗಳು ಇದೀಗ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿವೆ.

ಒಟ್ಟಿನಲ್ಲಿ, ನವಲಗುಂದ ಕಾಂಗ್ರೆಸ್‌ನಲ್ಲಿ ಮೇಲ್ನೋಟಕ್ಕೆ ಎಲ್ಲವೂ ಸರಿಯಿದ್ದರೂ ಒಳಗೊಳಗೆ ಅಸಮಾಧಾನದ ಹೊಗೆ ಆಡುತ್ತಿದೆಯೇ ಎಂಬ ಚರ್ಚೆ ಶುರುವಾಗಿದೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ನವಲಗುಂದ ಕಾಂಗ್ರೆಸ್‌ನಲ್ಲಿ ಮೂಲ ಕಾಂಗ್ರೇಸ್ಸಿಗರ ಮೂಲೆಗುಂಪು ! ಸಂಚಲನ ಮೂಡಿಸಿದ ವಿಜಯ ಕುಲಕರ್ಣಿ ಹಾಗೂ ವಿನೋದ ಅಸೂಟಿ ಮಾತು

ನವಲಗುಂದ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ನಲ್ಲಿ ಮೂಲ ಕಾಂಗ್ರೆಸ್ಸಿಗರು ಮತ್ತು ವಲಸಿಗರ ನಡುವಿನ ಅಸಮಾಧಾನ ಇದೀಗ ಬಹಿರಂಗ ಚರ್ಚೆಗೆ ಗ್ರಾಸವಾಗಿದೆ. ಪಕ್ಷಕ್ಕಾಗಿ ಹಲವು ವರ್ಷಗಳಿಂದ ದುಡಿದ ಮೂಲ ಕಾಂಗ್ರೆಸ್ಸಿಗರನ್ನು

Live Cricket

error: Content is protected !!