ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿ ಪಕ್ಷ ತ್ಯಜಿಸಿ ಜೆಡಿಎಸ್ ಸೇರಿದ್ದ ಶಿವಮೊಗ್ಗದ ಆಯನೂರು ಮಂಜುನಾಥ ಇದೀಗ ಜೆಡಿಎಸ್ ಗೆ ರಾಜೀನಾಮೆ ನೀಡಿ ಕಾಂಗ್ರೇಸ್ ಪಕ್ಷ ಸೇರಿದ್ದಾರೆ. ಕೇವಲ ನಾಲ್ಕು ತಿಂಗಳ ಅವಧಿಯಲ್ಲಿ ಎರಡು ಪಕ್ಷಗಳನ್ನು ಬದಲಾಯಿಸಿದ್ದಾರೆ. ಕಾಂಗ್ರೇಸ್ ಸೇರಿದ ಆಯನೂರು ಮಂಜುನಾಥರನ್ನು ಕೆ ಪಿ ಸಿ ಸಿ ಅಧ್ಯಕ್ಷ ಹಾಗು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ ಸ್ವಾಗತಿಸಿದರು. ಅಪಾರ ಬೆಂಬಲಿಗರೊಂದಿಗೆ ಆಯನೂರು ಕಾಂಗ್ರೇಸ್ ಸೇರಿದರು. ಇದು ನನ್ನ ರಾಜಕೀಯ ಜೀವನದ ಲಾಸ್ಟ್ ಸ್ಟಾಪ್ ಎಂದ ಮಂಜುನಾಥ, ಪಕ್ಷ ನೀಡುವ ಜವಾಬ್ದಾರಿಯನ್ನು ಪಾಲಿಸುವದಾಗಿ ಹೇಳಿದರು. ಆಯನೂರು ಮಂಜುನಾಥ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋಲು ಅನುಭವಿಸಿದ್ದರು.
Author: Karnataka Files
Post Views: 2





