ಲಿಂಗಾಯತ ಸಮಾಜದ ಪ್ರಭಾವಿ ಮುಖಂಡ, ಮಾಜಿ ಸಚಿವ ವಿನಯ ಕುಲಕರ್ಣಿ ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ನೇಮಕಗೊಳ್ಳುವದು ಖಚಿತ ಎನ್ನಲಾಗಿದೆ. ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ 20 ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲು ರಣತಂತ್ರ ಹೆಣೆಯಲಾಗಿದೆ. ಉತ್ತರ ಕರ್ನಾಟಕದಲ್ಲಿ ಪ್ರಭಾವಿಯಾಗಿರುವ ಧಾರವಾಡ ಗ್ರಾಮೀಣ ಶಾಸಕ ವಿನಯ ಕುಲಕರ್ಣಿಯವರ ನೇಮಕಕ್ಕೆ ಹಸಿರು ನಿಶಾನೆ ಸಿಕ್ಕಿದೆ ಎನ್ನಲಾಗಿದೆ. ಈ ಮೂಲಕ ವಿನಯ ಕುಲಕರ್ಣಿಯವರನ್ನು ಕಾರ್ಯಾಧ್ಯಕ್ಷನನ್ನಾಗಿ ಮಾಡಿ ಬೆಳಗಾವಿ ವಿಭಾಗದ ಉಸ್ತುವಾರಿ ವಹಿಸಿಕೊಡುತ್ತಾರೆ ಅನ್ನೋ ಮಾಹಿತಿ
ಕರ್ನಾಟಕ ಫೈಲ್ಸ್ ಗೆ ಲಭ್ಯವಾಗಿದೆ. ಅಖಿಲ್ ಭಾರತ ವೀರಶೈವ ಮಹಾಸಭಾದ ಉಪಾಧ್ಯಕ್ಷರು ಆಗಿರುವ ವಿನಯ ಕುಲಕರ್ಣಿಯವರ ನೇಮಕದಿಂದ ಉತ್ತರ ಕರ್ನಾಟಕದಲ್ಲಿ ಪಕ್ಷದ ಬೇರು ಗಟ್ಟಿಗೊಳಿಸಲು ದೆಹಲಿಯ ಹೈಕಮಾಂಡ ಯೋಚಿಸಿದೆ.
Author: Karnataka Files
Post Views: 2





