ಅನೇಕ ನಾಯಕರು ಪಕ್ಷ ಬಿಟ್ಟು ಹೋದರು ಸಹ ಪಕ್ಷದ ಸಂಘಟನೆ ಇದೆ. ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ 22 ರಿಂದ 25 ಸ್ಥಾನಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲ್ಲುತ್ತಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಭವಿಷ್ಯ ನುಡಿದಿದ್ದಾರೆ. ಧಾರವಾಡದಲ್ಲಿ ಮಾತನಾಡಿದ ಅವರು, ವಿಧಾನಸಭೆ ಚುನಾವಣೆಯಲ್ಲಿ ಪಕ್ಷಕ್ಕೆ ಹಿನ್ನೆಡೆಯಾಗಿದೆ. ಧಾರವಾಡ ಲೋಕಸಭಾ ಕ್ಷೇತ್ರದ 8 ಶಾಸಕರ ಪೈಕಿ 4 ರಲ್ಲಿ ಗೆದ್ದಿದ್ದೇವೆ. 60 ಸಾವಿರ ಮತಗಳ ಲೀಡ್ ಬಂದಿದೆ. ಹಾಗಾಗಿ ಈ ಸಲವು ಧಾರವಾಡ ಲೋಕಸಭಾ ಕ್ಷೇತ್ರ ಸೇರಿದಂತೆ ರಾಜ್ಯದಲ್ಲಿ ಅತೀ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಮೂಲಕ ಮೂರನೇ ಬಾರಿಗೆ ನರೇಂದ್ರ ಮೋದಿಯವರು ಪ್ರಧಾನಿಯಾಗ್ತಾರೆ ಎಂದು ಭವಿಷ್ಯ ನುಡಿದಿದ್ದಾರೆ.
Author: Karnataka Files
Post Views: 2





