ವಿಧಾನಸಭಾ ಚುನಾವಣೆಯಲ್ಲಿ 19 ಸ್ಥಾನಗಳನ್ನು ಪಡೆಯುವ ಮೂಲಕ, ಕಾಂಗ್ರೇಸ್ ಸರ್ಕಾರದ ಆಡಳಿತದ ವಿರುದ್ಧ ಹೆಚ್ಚು ಸದ್ದು ಮಾಡುತ್ತಿರುವ ಜೆಡಿಎಸ್ ಇಂದು ಬೆಂಗಳೂರಿನ ಜೆ ಪಿ ಭವನದಲ್ಲಿ ಕೋರ ಕಮಿಟಿ ಸಭೆ ನಡೆಸಿತು. ಬೂತ್ ಮಟ್ಟದಿಂದ ಜೆಡಿಎಸ್ ಪಕ್ಷವನ್ನು ಸದೃಢವಾಗಿ ಕಟ್ಟಲು ತೀರ್ಮಾನಿಸಲಾಯಿತು. ಮುಂಬರುವ ದಿನಗಳಲ್ಲಿ ಲೋಕಸಭಾ ಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡು ಸಂಘಟನೆಯತ್ತ ಚಿತ್ತ ಹರಿಸುವಂತೆ ಕೋರ ಕಮಿಟಿ ಅಧ್ಯಕ್ಷ, ಶಾಸಕ ಜಿ ಟಿ ದೇವೇಗೌಡ ಕರೆ ನೀಡಿದರು. ಸಭೆಯಲ್ಲಿ ಮಾಜಿ ಸಚಿವ ಅಲ್ಕೋಡ ಹನುಮಂತಪ್ಪ, ಮಾಜಿ ಶಾಸಕ ವೀರಭದ್ರಪ್ಪ ಹಾಲಹರವಿ, ವೈ ಎಸ್ ವಿ ದತ್ತ, ವೆಂಕಟರಾವ ನಾಡಗೌಡ ಸೇರಿದಂತೆ ಅನೇಕರು ಭಾಗವಹಿಸಿದ್ದರು.
Author: Karnataka Files
Post Views: 2





