ರಾಜ್ಯದಲ್ಲಿ ಭೀಕರ ಬರಗಾಲದ ಪರಿಸ್ಥಿತಿ ಎದುರಾಗಿದೆ. 134 ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಿಸಲು ಸರ್ಕಾರ, ಅಧಿಕಾರಿಗಳಿಂದ ವರದಿ ತರಿಸಿಕೊಂಡಿದೆ. ಬರಗಾಲ ಪೀಡಿತ ತಾಲೂಕುಗಳೆಂದು ಸಾರಲು ಕೆಲವು ತಾಂತ್ರಿಕ ಅಂಶಗಳು ಅಡ್ಡಿಯಾಗಿವೆ. ಬರಗಾಲ ಪರಿಹಾರಕ್ಕೆ ಸಂಬಂಧಪಟ್ಟಂತೆ ಕೇಂದ್ರದಲ್ಲಿ ಕೆಲ ನಿಯಮಗಳನ್ನು ಪುನರ್ ಪರಿಶೀಲನೆ ಮಾಡಬೇಕಿದೆ.
ಈ ವಿಷಯಕ್ಕೆ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಧಾನಿಗಳಿಗೆ ಪತ್ರ ಬರೆದಿದ್ದು, ಉತ್ತರಕ್ಕಾಗಿ ಕಾಯುತ್ತಿದ್ದಾರೆ. ಸರ್ಕಾರ ಒಮ್ಮೆ ಬರ ಎಂದು ಸಾರಿದ ಮೇಲೆ ಜನರ ಕೈಗೆ ಕೆಲಸ, ಕುಡಿಯಲು ನೀರು, ಪರ್ಯಾಯ ಬೆಳೆ ಬೆಳೆಯಲು ಸಹಾಯ ಮಾಡಬೇಕು. ಇದಕ್ಕೆ ಕೇಂದ್ರ ಸರ್ಕಾರದ ಸಹಾಯವು ಬೇಕು ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ. ಇದೆಲ್ಲವನ್ನು ಗಮನಿಸಿದಾಗ ಬರಗಾಲ ಘೋಷಣೆ ಬಹುತೇಕ ಮುಂದೆ ಹೋಗುವ ಸಾಧ್ಯತೆ ಇದೆ.
Author: Karnataka Files
Post Views: 15





