Download Our App

Follow us

Home » ಹಬ್ಬಗಳು » ಐತಿಹಾಸಿಕ ಬಾಹುಬಲಿ ಮಹಾ ಮಸ್ತಕಾಭಿಷೇಕಕ್ಕೆ ಸಿದ್ಧತೆ. ಫೆಬ್ರವರಿ 22 ರಿಂದ ಆರಂಭ.

ಐತಿಹಾಸಿಕ ಬಾಹುಬಲಿ ಮಹಾ ಮಸ್ತಕಾಭಿಷೇಕಕ್ಕೆ ಸಿದ್ಧತೆ. ಫೆಬ್ರವರಿ 22 ರಿಂದ ಆರಂಭ.

ದಕ್ಷಿಣ ಕನ್ನಡ ಜಿಲ್ಲೆಯ ವೇಣೂರಿನ ಭಗವಾನ ಬಾಹುಬಲಿಯ, ಮಹಾ ಮಸ್ತಕಾಭಿಷೇಕಕ್ಕೆ ಕ್ಷಣಗಣನೆ ಆರಂಭವಾಗಿದೆ. ಪ್ರತಿ 12 ವರ್ಷಗಳಿಗೊಮ್ಮೆ ಮಹಾಭಿಷೇಕ ನಡೆಯುತ್ತದೆ. ಫೆಬ್ರವರಿ 22 ರಿಂದ ಮಾರ್ಚ 1 ರ ವರೆಗೆ ಅದ್ದೂರಿಯಾಗಿ ಆಚರಿಸಲು ನಿರ್ಧರಿಸಲಾಗಿದೆ. ಮಹಾಮಸ್ತಕಾಭಿಷೇಕಕ್ಕೆ ಎಲ್ಲ ತರದ ಸಿದ್ಧತೆ ಮಾಡಿಕೊಳ್ಳುವಂತೆ ಸಚಿವ ದಿನೇಶ ಗುಂಡೂರಾವ ತಿಳಿಸಿದ್ದಾರೆ. ದಿನೇಶ ಗುಂಡೂರಾವ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕಾರ್ಯಕ್ರಮ ಅದ್ದೂರಿಯಾಗಿ ನಡೆಸಲು ತೀರ್ಮಾನ ತೆಗೆದುಕೊಳ್ಳಲಾಗಿದ್ದು, ಸರ್ಕಾರ ಎಲ್ಲ ರೀತಿಯ ಸಹಾಯ, ಸಹಕಾರ ನೀಡಲಿದೆ ಎಂದು ತಿಳಿಸಿದರು.

ವೇಣೂರು, ದಕ್ಷಿಣ ಕನ್ನಡದ ಬೆಳ್ತಂಗಡಿ ತಾಲ್ಲೂಕಿನ ಫಲ್ಗುಣಿ ನದಿಯ ದಡದಲ್ಲಿರುವ ಒಂದು ಸಣ್ಣ ಗ್ರಾಮವಾಗಿದ್ದು, ಒಂದು ಕಾಲದಲ್ಲಿ ಜೈನ ಧರ್ಮದ ಸ್ಥಾನವಾಗಿತ್ತು ಮತ್ತು ಅಜಿಲ ರಾಜವಂಶದ ರಾಜಧಾನಿಯಾಗಿತ್ತು . ಇಲ್ಲಿ ಏಕಶಿಲೆಯಲ್ಲಿರುವ ಬಾಹುಬಲಿ ಮೂರ್ತಿ ಇದ್ದು, 12 ವರ್ಷಕ್ಕೊಮ್ಮೆ ಮಹಾಮಸ್ತಕಾಭಿಷೇಕ ನಡೆಯುತ್ತದೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ನವಲಗುಂದ ನರಗುಂದ ರೈತ ಬಂಡಾಯಕ್ಕೆ 46 ವರ್ಷ ಪೂರ್ಣ : ರೈತರ ಪಾದಕ್ಕೆ ಶರಣಾಗಿದ್ದ ಕಾಂಗ್ರೇಸ್ ಸರ್ಕಾರ : ಅಂದು ನಡೆದಿದ್ದು ಏನು? ಇಲ್ಲಿದೆ ಡಿಟೇಲ್ ಸ್ಟೋರಿ

ನವಲಗುಂದ ನರಗುಂದ ರೈತ ಬಂಡಾಯ ನಡೆದು ಇವತ್ತಿಗೆ 46 ವರ್ಷಗಳು ಪೂರ್ಣಗೊಂಡಿವೆ. ಪ್ರತಿ ವರ್ಷ ಜುಲೈ 21 ರಂದು ರೈತರು, ಈ ದಿನವನ್ನು ರೈತ ಹುತಾತ್ಮ ದಿನಾಚರಣೆ

Live Cricket

error: Content is protected !!