ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮೈಸೂರಿನಲ್ಲಿರುವ ಮನೆ ಮೇಲೆ ಕಲ್ಲೆಸೆದ ಆರೋಪಿಯನ್ನು ಸರಸ್ವತಿಪುರಂ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಸತ್ಯಮೂರ್ತಿ ಎಂದು ಗುರುತಿಸಲಾಗಿದೆ. ಸತ್ಯಮೂರ್ತಿ ನಿನ್ನೇ ಟಿ ಕೆ ಲೇಔಟ್ ನಲ್ಲಿರುವ ನಿವಾಸದ ಮೇಲೆ ಕಲ್ಲೆಸೆದು ಪರಾರಿಯಾಗಿದ್ದ. ತಕ್ಷಣ ಅಲರ್ಟ್ ಆದ ಪೊಲೀಸರು ಆರೋಪಿ ಸತ್ಯಮೂರ್ತಿಯನ್ನು ಬಂಧಿಸಿದ್ದಾರೆ. ಆರೋಪಿ ವಿರುದ್ದ 427 353 ಹಾಗೂ ಸೆಕ್ಷನ್ 504 ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಕಲ್ಲು ಎಸೆದು ಮೈಸೂರು ಹೊರವಲಯದಲ್ಲಿ ತಲೆ ಮರೆಸಿಕೊಂಡಿದ್ದ ಆರೋಪಿಯನ್ನ ಸರಸ್ವತಿಪುರಂ ಇನ್ಸಪೆಕ್ಟರ್ ರವೀಂದ್ರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿ ಸುಳಿವು ಪತ್ತೆ ಹಚ್ಚಿದ ಪೊಲೀಸರ ತಂಡ ವಶಕ್ಕೆ ಪಡೆಯಲು ಹೋದಾಗಲು ಪೊಲೀಸರ ಮೇಲೆ ಹಲ್ಲೆ ನಡೆಸಲು ಯತ್ನಿಸಿದ್ದಾನೆ.
ಆರೋಪಿ ಸತ್ಯಮೂರ್ತಿ, ಸಬ್ ಇನ್ಸಪೆಕ್ಟರ್ ಮಹೇಂದ್ರ ಹಾಗೂ ಇತರ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಾನೆ. ಸಿನಿಮೀಯ ರೀತಿಯಲ್ಲಿ ಆರೋಪಿ ಸತ್ಯಮೂರ್ತಿ ಪೊಲೀಸರು ಬಂಧಿಸಿದ್ದಾರೆ.
Author: Karnataka Files
Post Views: 2





