ವೀರಶೈವ ಲಿಂಗಾಯತ ವಿಚಾರ, ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೇಸ್ ಸರ್ಕಾರಕ್ಕೆ ತಲೆನೋವಾಗಿ ಪರಿಣಮಿಸಿದೆ. ಕಳೆದೊಂದು ತಿಂಗಳಿನಿಂದ ಶಾಮನೂರು ಶಿವಶಂಕರಪ್ಪ ಹಾಗೂ ಸರ್ಕಾರದ ನಡುವೆ ವಾಕ್ಸಮರ ನಡೆಡಿದೆ.
ಇದೆಲ್ಲದರ ನಡುವೆ ಇದೀಗ ವೀರಶೈವ ಲಿಂಗಾಯತ ಅಧಿಕಾರಿಗಳು ಎಂಬ ಹೆಸರಿನ ಎಕ್ಸ್ (ಟ್ವಿಟರ್ ) ಖಾತೆಯಲ್ಲಿ, ಕಾಂಗ್ರೇಸ್ಸಿಗೆ ಸವಾಲು ಎಸೆಯಲಾಗಿದೆ.
” ಕಾಂಗ್ರೇಸ್ ನಲ್ಲಿ ವೀರಶೈವ ಲಿಂಗಾಯತ ಮುಖ್ಯಮಂತ್ರಿ ಯಾವಾಗ “
ಎಂದು ಪ್ರಶ್ನಿಸಿದೆ.

ಲಿಂಗಾಯತ ಅಧಿಕಾರಿಗಳಿಗೆ ಆಯಕಟ್ಟಿನ ಸ್ಥಳ ಕೊಡುತ್ತಿಲ್ಲ, ವೀರಶೈವ ಲಿಂಗಾಯತರನ್ನು ಕಡೆಗಣಿಸಲಾಗುತ್ತಿದೆ ಎಂಬ ವಿಚಾರ ರಾಜ್ಯದಲ್ಲಿ ದೊಡ್ಡ ಸದ್ದು ಮಾಡಿದೆ. ಅಲ್ಲದೆ ಡಿಸೆಂಬರ್ ತಿಂಗಳಲ್ಲಿ ದಾವಣಗೆರೆಯಲ್ಲಿ ಅಖಿಲ ಭಾರತ ಮಟ್ಟದ ವೀರಶೈವ ಲಿಂಗಾಯತ ಅಧಿವೇಶನ ನಡೆಸಲು ಮುಂದಾಗಿದ್ದು, ಸರ್ಕಾರಕ್ಕೆ ಕಟ್ಟಿ ಹಾಕುವ ಪ್ರಯತ್ನ ನಡೆದಿದೆಯಾ ಎಂಬ ಚರ್ಚೆ ರಾಜಕೀಯ ಪಡಸಾಲೆಯಲ್ಲಿ ನಡೆದಿದೆ.
Author: Karnataka Files
Post Views: 7





