Download Our App

Follow us

Home » ಪ್ರಯಾಣ » ಗದಗ ಬಳಿ ಬಸ್ ಮತ್ತು ಟಾಟಾ ಸುಮೋ ನಡುವೆ ಭೀಕರ ಅಪಘಾತ / ಐವರ ಸಾವು

ಗದಗ ಬಳಿ ಬಸ್ ಮತ್ತು ಟಾಟಾ ಸುಮೋ ನಡುವೆ ಭೀಕರ ಅಪಘಾತ / ಐವರ ಸಾವು

ಗದಗ ಬಳಿಯಿರುವ ನರೇಗಲ್ ಪಟ್ಟಣದ ಹೊರವಲಯದಲ್ಲಿ ವಾಯುವ್ಯ ಕರ್ನಾಟಕ ಸಾರಿಗೆ ಬಸ್ ಹಾಗೂ ಟಾಟಾ ಸುಮೋ ನಡುವೆ ಭೀಕರ ಅಪಘಾತ ಸಂಭವಿಸಿದೆ. ಈ ದುರ್ಘಟನೆಯಲ್ಲಿ ಐವರು ಸಾವನ್ನಪ್ಪಿದ್ದಾರೆ. ಮುಖಾ ಮುಖಿ ಡಿಕ್ಕಿ ಹೊಡೆದಿದ್ದು, ಸುಮೋ ನುಜ್ಜುಗುಜ್ಜಾಗಿದೆ. ಸುಮೋದಲ್ಲಿದ್ದವರು ಸಾವನ್ನಪ್ಪಿದ್ದಾರೆ.

ಗಜೇಂದ್ರಗಡ ಮಾರ್ಗವಾಗಿ ಶಿರಹಟ್ಟಿಯ ಫಕಿರೇಶ್ವರ ಮಠಕ್ಕೆ ಹೊರಟವರು ಮಸಣ ಸೇರಿದ್ದಾರೆ. ಸತ್ತವರು ಕಲಬುರಗಿ ಜಿಲ್ಲೆಗೆ ಸೇರಿದವರು ಎನ್ನಲಾಗಿದೆ. ಬಸ್ಸಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ.

Karnataka Files
Author: Karnataka Files

Leave a Comment

RELATED LATEST NEWS

error: Content is protected !!