ಮುಖ್ಯಮಂತ್ರಿ ಸಿದ್ದರಾಮಯ್ಯ, ಕರ್ನಾಟಕ ರತ್ನ ಡಾ. ಪುನೀತ್ ರಾಜಕುಮಾರ ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಪುನೀತ್ ನೆನೆದು ಭಾವುಕರಾದರು. ಪುನೀತ್ ರಾಜ್‍ಕುಮಾರ್ ಮರಣ ಹೊಂದಿದಾಗ ನಮ್ಮ ಮನೆಯಲ್ಲಿಯೇ ಯಾರೋ ಒಬ್ಬರು ತೀರಿಕೊಂಡಿದ್ದಾರೆ ಎಂಬಂತಿತ್ತು. ಎಲ್ಲಾ ಊರುಗಳಲ್ಲಿ ಪ್ರತಿಮೆ ಸ್ಥಾಪಿಸಿ, ಕಟೌಟ್ ಹಾಕಿ ಜನರು ದುಃಖಿಸಿದ್ದು ಕಂಡಾಗ ಪುನೀತ್ ಅವರ ಜನಪ್ರಿಯತೆ ಎಷ್ಟಿತ್ತು ಎಂದು ತಿಳಿಯುತ್ತದೆ. ಬಹಳ ಬೇಗ ಅವರು ನಮ್ಮನ್ನು ಅಗಲಿದರು. ಒಂದುವೇಳೆ ಪುನೀತ್ ಮತ್ತಷ್ಟು ಕಾಲ ಬದುಕಿದ್ದರೆ ನಾವ್ಯಾರು ನಿರೀಕ್ಷೆ ಮಾಡದಷ್ಟು ಎತ್ತರಕ್ಕೆ ಬೆಳೆಯುತ್ತಿದ್ದರು ಎಂದು ಹೇಳುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾವುಕರಾದರು.
ಪುನೀತ್ ರಾಜಕುಮಾರ ಅವರ ಪ್ರತಿಮೆ ಅನಾವರಣಗೂಳಿಸಿ ಮಾತನಾಡಿದ ಸಿದ್ದರಾಮಯ್ಯನವರು, ಅಂತಹ ಮೇರು ವ್ಯಕ್ತಿತ್ವ ಹೊಂದಿದವರನ್ನು ನೋಡೋಕೆ ಸಾಧ್ಯವಿಲ್ಲ ಎಂದು ಹೇಳಿದರು.

Author: Karnataka Files
Post Views: 2





