ಕೇರಳದ ಕೊಟ್ಟಾಯಂ ಜಿಲ್ಲೆಯ ಎರುಮೇಲಿಯಲ್ಲಿ ಸಂಭವಿಸಿರುವ ಖಾಸಗಿ ಬಸ್ ಅಪಘಾತದಲ್ಲಿ ಶಬರಿಮಲೆ ಕ್ಷೇತ್ರದ ಪುಣ್ಯಯಾತ್ರೆ ಕೈಗೊಂಡಿದ್ದ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ 13 ಮಂದಿ ಭಕ್ತರು ತೀವ್ರ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ಧಾಖಲಿಸಲಾಗಿದೆ. 13 ಜನರ ಪೈಕಿ ಐವರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದು ಬಂದಿದೆ.
ಶಬರಿಮಲೆಯ ಶ್ರೀ ಅಯ್ಯಪ್ಪ ಸ್ವಾಮಿ ಭಕ್ತರ ಮಂಡಲಯಾತ್ರೆ ಇನ್ನೇನು ಆರಂಭವಾಗಲಿದ್ದು, ಎಲ್ಲರೂ ಸುರಕ್ಷಿತವಾಗಿ ಯಾತ್ರೆ ಕೈಗೊಳ್ಳಬೇಕು. ಪ್ರತೀ ವರ್ಷದಂತೆ ಈ ವರ್ಷವೂ ಭಕ್ತರ ಸಂಖ್ಯೆ ಹೆಚ್ಚೇ ಇರುತ್ತದೆ, ಹೀಗಾಗಿ ಎಲ್ಲರೂ ಮುನ್ನೆಚ್ಚರಿಕೆ ವಹಿಸಿಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ತಿಳಿಸಿದ್ದಾರೆ. ಗಾಯಗೊಂಡಿರುವ ಭಕ್ತರು ಬೇಗ ಗುಣಮುಖರಾಗಿ ಬರಲಿ ಎಂದು ಹಾರೈಸಿದ್ದಾರೆ.
Author: Karnataka Files
Post Views: 2





