Download Our App

Follow us

Home » ರಾಜಕೀಯ » ಮಹಿಳಾ ಸಹಕಾರಿ ಸ್ವಸಹಾಯ ಗುಂಪುಗಳಿಗೆ ಸರ್ಕಾರದಿಂದಲೇ ಪೆಟ್ರೋಲ್ ಪಂಪ್

ಮಹಿಳಾ ಸಹಕಾರಿ ಸ್ವಸಹಾಯ ಗುಂಪುಗಳಿಗೆ ಸರ್ಕಾರದಿಂದಲೇ ಪೆಟ್ರೋಲ್ ಪಂಪ್

ರಾಜ್ಯದಲ್ಲಿ ಇನ್ಮೇಲೆ ಮಹಿಳಾ ಸಹಕಾರಿ ಸ್ವಸಹಾಯ ಸಂಘಗಳಿಗೆ ಸರ್ಕಾರ ಪೆಟ್ರೋಲ್ ಪಂಪ್ ನೀಡಲು ತೀರ್ಮಾನಿಸಿದೆ. ಸಿದ್ದರಾಮಯ್ಯ ಸರ್ಕಾರ ಮಹಿಳಾ ಕಲ್ಯಾಣ ಕಾರ್ಯಕ್ರಮಗಳಿಗಾಗಿ ಪ್ರಸಕ್ತ ಸಾಲಿನಲ್ಲಿ 70,427 ಕೋಟಿ ಹಣ ಮೀಸಲಿಟ್ಟಿದೆ. ಸ್ತ್ರೀಯರು ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ವಲಯದಲ್ಲಿ ಪರಿಪೂರ್ಣವಾಗಿ ತೊಡಗಿಸಿಕೊಂಡಾಗ ಮಾತ್ರ ದೇಶದ ಆರ್ಥಿಕ ಅಭಿವೃದ್ಧಿಯ ವೇಗ ಹೆಚ್ಚಿರುತ್ತದೆ ಎಂದು ಸಿದ್ದರಾಮಯ್ಯನವರು ಹೇಳಿದ್ದಾರೆ. ಇದಕ್ಕಾಗಿ ಸ್ತ್ರೀಯರು ಉದ್ಯಮ, ಕೈಗಾರಿಕೆ, ಸೇವಾ ವಲಯದಲ್ಲಿ ಭಾಗವಹಿಸುವುದು ಅತಿ ಮುಖ್ಯ.  ಸ್ತ್ರೀ ಸ್ವಾವಲಂಬನೆಗಾಗಿ 100 ಪೆಟ್ರೋಲ್ ಬಂಕ್‌ಗಳನ್ನು ಸ್ಥಾಪಿಸಿ, ಅವುಗಳನ್ನು ಮಹಿಳಾ ಸಹಕಾರಿ ಸ್ವಸಹಾಯ ಸಂಘಗಳ ಮೂಲಕ ನಿರ್ವಹಣೆಗೆ ವಹಿಸಲು ಕ್ರಮ ಹಾಗೂ ಪೆಟ್ರೋಲ್ ಬಂಕ್‌ಗಳ ಸ್ಥಾಪನೆಗೆ ಭೂಮಿ, ತರಬೇತಿ, ಪರವಾನಗಿ ಸೇರಿದಂತೆ ಅಗತ್ಯ ಬೆಂಬಲ ನೀಡುವುದಾಗಿ ಬಜೆಟ್‌ನಲ್ಲಿ ಘೋಷಿಸಿದ್ದೇವೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ರಾಜ್ಯಸಭೆಗೆ ಕರ್ನಾಟಕದಿಂದ ಕಾಂಗ್ರೇಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ : ಮನ್ಸೂರ್ ಅಲಿ ಖಾನ್ ಗೆ ಟಿಕೇಟ್ ಘೋಷಣೆ

ಕರ್ನಾಟಕದಿಂದ ರಾಜ್ಯಸಭೆಗೆ ನಡೆಯುವ ಚುನಾವಣೆಗೆ ಕಾಂಗ್ರೇಸ್ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟ ಮಾಡಿದೆ. ಕರ್ನಾಟಕದಿಂದ ಅಖಿಲ ಭಾರತ ಕಾಂಗ್ರೇಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪವನ ಖೇರಾ ಹಾಗೂ

Live Cricket

error: Content is protected !!