ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಸಂತೆಬೆನ್ನೂರಿನಲ್ಲಿ ಇರುವ ಬಾಂಬೆ ಬಿಗ್ ಬಜಾರ್ ಮಳಿಗೆಗೆ ಬೆಂಕಿ ಬಿದ್ದಿದೆ. ಮಳಿಗೆಗೆ ಬೆಂಕಿ ಬಿದ್ದ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ಸಾಮಾಗ್ರಿಗಳು ಭಸ್ಮವಾಗಿವೆ. ಬೆಂಕಿಯ ಜ್ವಾಲೆ ಪಕ್ಕದ ಅಂಗಡಿಗೂ ವ್ಯಾಪಿಸಿದ್ದು, ಅಗ್ನಿಶಾಮಕ ದಳ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದೆ. ಶಾರ್ಟ್ ಸರ್ಕಿಟ್ ನಿಂದ ಈ ಅನಾಹುತ ಸಂಭವಿಸಿದೆ ಎಂದು ಹೇಳಲಾಗಿದ್ದು, ಅದೃಷ್ಟವಶಾತ ಯಾರಿಗೂ ಪ್ರಾಣ ಹಾನಿಯಾಗಿಲ್ಲ.
Author: Karnataka Files
Post Views: 5





